Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:13 - ಕನ್ನಡ ಸತ್ಯವೇದವು J.V. (BSI)

13 ದುಷ್ಟನು ನಿನ್ನನ್ನು ಯಾಕೆ ಅಲಕ್ಷ್ಯಮಾಡಬೇಕು? ದೇವರು ವಿಚಾರಿಸುವದೇ ಇಲ್ಲವೆಂದು ಹೇಳಿಕೊಳ್ಳುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ, ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದುರುಳನು ನಿನ್ನನಲಕ್ಷ್ಯ ಮಾಡುವುದೆಂತು? I “ದೇವನೆನ್ನ ವಿಚಾರಿಸನು” ಎನ್ನುವುದೆಂತು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದುಷ್ಟರು ದೇವರಿಗೆ ವಿರೋಧವಾಗಿ ಎದ್ದಿರುವುದೇಕೆ? ಆತನು ತಮ್ಮನ್ನು ದಂಡಿಸುವುದಿಲ್ಲವೆಂದು ಅವರು ಆಲೋಚಿಸಿಕೊಂಡಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ? “ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ,” ಎಂದು ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:13
13 ತಿಳಿವುಗಳ ಹೋಲಿಕೆ  

ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು.


ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿ ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.


ದೇವರೇ, ವಿರೋಧಿಗಳು ಇನ್ನೆಲ್ಲಿಯತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?


ಇವನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗುಂಟಾದ ಕೃಪೆಯನ್ನು ನೆನಪುಮಾಡಿಕೊಳ್ಳದೆ ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ - ಯೆಹೋವನೇ ನೋಡಿ ವಿಚಾರಿಸಲಿ ಅಂದನು.


ಪೂರಾ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ಓಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ ಅಂದನು.


ಇದಲ್ಲದೆ ನಿಮ್ಮ ರಕ್ತವನ್ನು ಸುರಿಸಿ ಜೀವತೆಗೆಯುವವರಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ ಅದಕ್ಕೂ ಮನುಷ್ಯನಾಗಿದ್ದರೆ, ಹತವಾದವನು ಅವನ ಸಹೋದರನಾಗಿರುವದರಿಂದ, ಅವನಿಗೂ ಮುಯ್ಯಿ ತೀರಿಸುವೆನೆಂದು ತಿಳಿದುಕೊಳ್ಳಿರಿ.


ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ಅದಕ್ಕೆ ರೂಬೇನನು - ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೇ; ನೀವು ಕೇಳಲಿಲ್ಲ. ಆದದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ನಾವು ಉತ್ತರ ಹೇಳಬೇಕಾಗಿ ಬಂತು ಅಂದನು.


ಎಚ್ಚರಿಕೆಯಾಗಿರ್ರಿ; ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ ಕುಟುಂಬವಾಗಲಿ ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ತುಂಬಿದ ಪಟ್ಟಣದಲ್ಲಿ ನರಳುವರು, ಗಾಯಪಟ್ಟವರು ಮೊರೆಯಿಡುವರು. ದೇವರಾದರೋ ಅದನ್ನು ಅಯುಕ್ತವೆಂದೆಣಿಸುವದಿಲ್ಲ.


ದೇವರು ಅವರಿಗೆ ಅಭಯವನ್ನು ಕೊಟ್ಟದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು