Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:15 - ಕನ್ನಡ ಸತ್ಯವೇದವು J.V. (BSI)

15 ದುಷ್ಟನ ಭುಜಬಲವನ್ನು ಮುರಿದುಹಾಕು; ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲ ಮಾಡಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಧೂರ್ತನ, ದುರುಳನ ಭುಜಬಲವನು ನೀ ಮುರಿದುಬಿಡು I ಆತನ ನೀಚತನವನು ಪರೀಕ್ಷಿಸಿ ಶೂನ್ಯಮಾಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೆಡುಕರನ್ನು ನಾಶಮಾಡು. ನಿನ್ನ ದೇಶದಿಂದ ಅವರನ್ನು ನಿರ್ಮೂಲಮಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದುಷ್ಟನ ಭುಜಬಲವನ್ನು ಮುರಿದುಬಿಡಿರಿ; ಕೆಟ್ಟದ್ದನ್ನು ಮಾಡುವವರಿಗೆ ಅವರ ಕೆಟ್ಟತನಕ್ಕೆ ಲೆಕ್ಕ ಕೇಳಿರಿ; ಇಲ್ಲದಿದ್ದರೆ ನೀವು ಅವನನ್ನು ಲೆಕ್ಕ ಕೇಳುವುದಿಲ್ಲ ಅಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:15
10 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.


ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.


ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವದು, ಎತ್ತಿದ ಕೈ ಮುರಿಯುವದು.


ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಮಂದೆಯನ್ನು ಕಾಯದೆ ಬಿಟ್ಟುಬಿಟ್ಟ ತರವಲ್ಲದ ಕುರುಬನ ಗತಿಯನ್ನು ಏನುಹೇಳಲಿ! ಖಡ್ಗವು ಅವನ ತೋಳಿಗೂ ಬಲಗಣ್ಣಿಗೂ ತಾಕುವದು; ಅವನ ತೋಳು ತೀರಾ ಒಣಗಿಹೋಗುವದು, ಅವನ ಬಲಗಣ್ಣು ಪೂರಾ ಮೊಬ್ಬಾಗುವದು.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].


ಹೀಗೆ ನಾನು ದೇಶದೊಳಗಿಂದ ಪುಂಡಾಟವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ಪುಂಡಾಟವನ್ನು ಅನುಸರಿಸಬಾರದೆಂದು ಬುದ್ಧಿಬರುವದು. ನಿಮ್ಮ ಪುಂಡಾಟದ ಫಲವನ್ನು ನಿಮಗೆ ತಿನ್ನಿಸುವರು;


ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯ ಮೇಲೆ ಬಡಿದು ಅವರ ಹಲ್ಲುಗಳನ್ನು ಉದುರಿಸಿ ಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು