Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:16 - ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪ್ರಭುವಿನ ಶ್ರೀಸಾಮ್ರಾಜ್ಯವು ಅನವರತ I ಆತನ ನಾಡಲಿ ಮುಗಿಯಿತು ಅನ್ಯಜನರ ಉಳಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಸದಾಕಾಲವೂ ರಾಜನಾಗಿರುವನು. ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಯುಗಯುಗಾಂತರಗಳಿಗೂ ಅರಸರಾಗಿದ್ದಾರೆ; ರಾಷ್ಟ್ರಗಳು ಅವರ ದೇಶದೊಳಗಿಂದ ಹೊರಹಾಕಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:16
20 ತಿಳಿವುಗಳ ಹೋಲಿಕೆ  

ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿದ್ದನು; ಆತನು ಸದಾಕಾಲವೂ ಅರಸನಾಗಿ ಕೂತಿರುವನು.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ನಿನ್ನ ರಾಜ್ಯವು ಶಾಶ್ವತವಾಗಿದೆ; ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವದು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ಆತನಿಂದ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಜನಾಂಗಗಳಂತೆಯೇ ನೀವೂ ನಾಶವಾಗಿ ಹೋಗುವಿರಿ.


ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವದು.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ಯೆಹೋವನು ಸದಾಕಾಲವೂ ಅರಸನಾಗಿರುವನು; ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು. ಯಾಹುವಿಗೆ ಸ್ತೋತ್ರ!


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ.


ಜನಾಂಗಗಳನ್ನು ಅವರ ಮುಂಗಡೆಯಿಂದ ಓಡಿಸಿಬಿಟ್ಟು ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವಾಸ್ತ್ಯವಾಗಿರುವಂತೆ ಹಂಚಿಕೊಟ್ಟು ಆ ಜನಾಂಗಗಳ ಬೀಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದುಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.


ನೀನು ಜನಾಂಗಗಳನ್ನು ಭಂಗಿಸಿ ದುಷ್ಟರನ್ನು ನಾಶಮಾಡಿದ್ದೀ; ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದೀ;


ಯೆಹೋವನೇ ಯುಗಯುಗಾಂತರಗಳಲ್ಲಿಯೂ ಆಳುವನು.


ಯೆಹೋವಾ, ಮಹಿಮಪ್ರತಾಪ ವೈಭವ ಪರಾಕ್ರಮಪ್ರಭಾವಗಳು ನಿನ್ನವು; ಭೂಮ್ಯಾಕಾಶಗಳಲ್ಲಿರುವದೆಲ್ಲಾ ನಿನ್ನದೇ. ಯೆಹೋವನೇ, ರಾಜ್ಯವು ನಿನ್ನದು; ನೀನು ಮಹೋನ್ನತನಾಗಿ ಸರ್ವವನ್ನೂ ಆಳುವವನಾಗಿರುತ್ತೀ.


ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯತೀರಿಸುವವನು; ಆತನು ಜನಾಂಗಗಳಿಗೆ ಸತ್ಯವಾಗಿಯೇ ತೀರ್ಪುಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು