Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:18 - ಕನ್ನಡ ಸತ್ಯವೇದವು J.V. (BSI)

18 ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತೀ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದಲಿತರಿಗೆ, ದಿಕ್ಕಿಲ್ಲದವರಿಗೆ ನ್ಯಾಯವನು ದೊರಕಿಸುವೆ I ಈ ಪರಿ ಇಳೆಮಾನವರ ತುಳಿತದಿಂದ ಪಾರುಮಾಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು. ಆಗ ಕೇವಲ ಮನುಷ್ಯರಿಂದ ಅವರಿಗೆ ಭಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ. ಹೀಗಾದರೆ ಕೇವಲ ಮಣ್ಣಿನ ಮಾನವರಿಂದ ಅವರಿಗೆ ಇನ್ನೆಂದಿಗೂ ಭಯ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:18
13 ತಿಳಿವುಗಳ ಹೋಲಿಕೆ  

ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ. ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.


ಯೆಹೋವನು ಕುಗ್ಗಿಹೋದವರಿಗೆ ಆಶ್ರಯವೂ ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ವಿುಕ್ಕ ಆಸ್ತಿಯನ್ನು ತನ್ನ ಮಕ್ಕಳಿಗೆ ಬಿಡುತ್ತಾರೆ.


ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; ದುಃಖಿತರೂ ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಆತನು ತಾಯಿತಂದೆಯಿಲ್ಲದವರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ; ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು