Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 100:1 - ಕನ್ನಡ ಸತ್ಯವೇದವು J.V. (BSI)

1 ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಗಾಯನ ಮಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 100:1
18 ತಿಳಿವುಗಳ ಹೋಲಿಕೆ  

ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.


ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯಮಂಡಲಿಯವರೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ -


ಚೀಯೋನ್ ನಗರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಆರ್ಭಟಿಸು! ಯೆರೂಸಲೇಮ್ ಪುರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!


ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರ್ರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹಧ್ವನಿ ಮಾಡಿರಿ.


ಇನ್ನೊಂದು ಸ್ಥಳದಲ್ಲಿ - ಜನಾಂಗಗಳಿರಾ, ದೇವರ ಜನರೊಡನೆ ಉಲ್ಲಾಸಪಡಿರಿ ಎಂದೂ


ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ.


ಜನಾಂಗಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ದೇಶಕ್ಕೋಸ್ಕರವೂ ದೋಷಪರಿಹಾರಮಾಡುತ್ತಾನೆ.


ನನ್ನ ದೇವರೇ, ಒಡೆಯನೇ, ನಿನ್ನನ್ನು ಘನಪಡಿಸುವೆನು; ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.


ಸರ್ವಜನಾಂಗಗಳಿರಾ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.


ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಆಳಿ ಭೂಪ್ರಜೆಗಳನ್ನೆಲ್ಲಾ ನಡಿಸುವಾತನಾಗಿರುವದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ.


ಸರ್ವಭೂನಿವಾಸಿಗಳು ನಿನಗೆ ಎರಗಿ ಭಜಿಸುತ್ತಾ ನಿನ್ನ ನಾಮವನ್ನು ಕೀರ್ತಿಸುವರು ಎಂದು ಬಿನ್ನೈಸಿರಿ. ಸೆಲಾ.


ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣಮಾಡಿದ್ದಾನೆ.


ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು