Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:10 - ಕನ್ನಡ ಸತ್ಯವೇದವು J.V. (BSI)

10 ಇದಕ್ಕೆಲ್ಲಾ ನಿನ್ನ ಕೋಪರೌದ್ರಗಳೇ ಕಾರಣ. ನೀನು ನನ್ನನ್ನು ಎತ್ತಿ ಒಗೆದುಬಿಟ್ಟಿದ್ದೀಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಕ್ಕೆಲ್ಲಾ ನಿನ್ನ ಕೋಪ, ರೌದ್ರಗಳೇ ಕಾರಣ, ನೀನು ನನ್ನನ್ನು ಎತ್ತಿ ಒಗೆದುಬಿಟ್ಟಿದ್ದಿಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ಕೋಪತಾಪಗಳೆ ಕಾರಣ ಇದಕ್ಕೆಲ್ಲಾ I ನನ್ನನು ಮೇಲಕ್ಕೆತ್ತಿ ಬಿಸಾಡಿಬಿಟ್ಟಿರುವೆಯಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ನನ್ನ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ನೀನು ನನ್ನನ್ನು ಮೇಲೆತ್ತಿ ಎಸೆದುಬಿಟ್ಟೆಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಕ್ಕೆ ಕಾರಣ ನೀವು ಗಮನ ಕೊಡದಿರುವುದೇ. ನೀವು ನನಗೆ ಲಕ್ಷ್ಯಕೊಡುತ್ತಾಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:10
16 ತಿಳಿವುಗಳ ಹೋಲಿಕೆ  

ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥವೇ ತಪ್ಪಿಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.


ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ;


ಯೆಹೋವನು ದೀನರಿಗೆ ಆಧಾರವಾಗಿದ್ದಾನೆ; ದುಷ್ಟರನ್ನು ನೆಲಕ್ಕೆ ಹತ್ತಿಸಿಬಿಡುತ್ತಾನೆ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ.


ಯೆಹೋವನು ನ್ಯಾಯಸ್ವರೂಪನು, ನಾನಾದರೋ ಆತನ ಆಜ್ಞೆಯನ್ನು ಮೀರಿದವಳು; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಯುವತೀ ಯುವಕರು ಸೆರೆ ಹೋಗಿದ್ದಾರಲ್ಲಾ!


ನೀನು ನರನನ್ನು ಪಾಪದ ನಿವಿುತ್ತ ಗದರಿಸಿ ಶಿಕ್ಷಿಸುವಾಗ ಅವನ ಚೆಲುವಿಕೆಯು ನುಸಿಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರೀ ಉಸಿರೇ. ಸೆಲಾ.


ನಾನು ಅಪರಾಧಿಯೇ ಹೌದೆಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.


ನೀನೇ ಹೋಗಿ ಕಾರ್ಯವನ್ನು ನಡಿಸು; ಧೈರ್ಯದಿಂದ ಯುದ್ಧಮಾಡು. [ಹಾಗೆ ಮಾಡದಿದ್ದರೆ] ದೇವರು ಶತ್ರುಗಳಿಂದ ನಿನ್ನನ್ನು ಅಪಜಯಪಡಿಸುವನು. ಜಯಾಪಜಯಗಳನ್ನುಂಟುಮಾಡುವದಕ್ಕೆ ಆತನು ಶಕ್ತನಾಗಿರುತ್ತಾನಲ್ಲಾ ಅಂದನು.


ನಾನು ಭಜನೋತ್ಸವದಲ್ಲಿ ಸೇರಿ ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ ಸ್ತೋತ್ರಪದಗಳನ್ನು ಹಾಡುತ್ತಾ ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು