Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:11 - ಕನ್ನಡ ಸತ್ಯವೇದವು J.V. (BSI)

11 ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿದ ಹುಲ್ಲಿನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿಹೋದ ಹುಲ್ಲಿನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಜೀವಮಾನವು ಸಂಜೆಯ ನೆರಳಿನಂತೆ ಕೊನೆಗೊಂಡಿದೆ. ನಾನು ಒಣಗಿ ಸಾಯುತ್ತಿರುವ ಹುಲ್ಲಿನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ದಿವಸಗಳು ಸಾಯಂಕಾಲದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:11
12 ತಿಳಿವುಗಳ ಹೋಲಿಕೆ  

ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಗಾಳಿಯು ಬಡಕೊಂಡುಹೋಗುವ ವಿುಡಿತೆಯಂತಿದ್ದೇನೆ.


ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.


ಮನುಷ್ಯನು ಬರೀ ಉಸಿರೇ; ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.


ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;


ನಿಮ್ಮ ಜೀವಮಾನವು ಎಂಥದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹಬೆಯಂತಿರುತ್ತೀರಿ.


ಐಶ್ವರ್ಯವಂತನಾದ ಸಹೋದರನು ತಾನು ಹೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. ಯಾಕಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿಹೋಗುವನು.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವದು ಮೇಲೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವದೆಂದು ಅವನು ಯಾರಿಂದ ತಿಳಿದುಕೊಂಡಾನು?


ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.


ಯೆಹೋವನ ರೌದ್ರದಂಡದ ಪೆಟ್ಟನ್ನು ತಿಂದವನು ನಾನೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು