Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:13 - ಕನ್ನಡ ಸತ್ಯವೇದವು J.V. (BSI)

13 ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯವಿುತಕಾಲವು ಬಂದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯಮಿತ ಕಾಲವು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎದ್ದು ಸಿಯೋನಿಗೆ ತೋರು ಸೌಜನ್ಯತೆ I ಅದಕ್ಕೆ ದಯೆತೋರಿಸುವ ಸಮಯವಿದೇ I ನಿಯಮಿತ ಕಾಲವಿದೋ ಬಂದುಬಿಟ್ಟಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀನು ಎದ್ದು ಚೀಯೋನನ್ನು ಸಂತೈಸುವೆ. ನೀನು ಚೀಯೋನಿಗೆ ದಯೆತೋರುವ ಕಾಲ ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಎದ್ದು ಚೀಯೋನನ್ನು ಕನಿಕರಿಸುವಿರಿ; ಅದನ್ನು ಕರುಣಿಸುವ ಕಾಲ ಇದೇ; ಹೌದು, ನೀವು ನಿರ್ಣಯಿಸಿದ ಸಮಯವು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:13
26 ತಿಳಿವುಗಳ ಹೋಲಿಕೆ  

ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ಯೆರೂಸಲೇವಿುನ ಸಂಗಡ ಹೃದಯಂಗಮವಾಗಿ ಮಾತಾಡಿರಿ; ಅದಕ್ಕೆ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ಎದ್ದು ಬಂದು ಸಹಾಯಮಾಡು; ನಿನ್ನ ಕೃಪೆಯ ನಿವಿುತ್ತ ನಮ್ಮನ್ನು ವಿಮೋಚಿಸು.


ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ಮರೆಯಬೇಡಿರಿ.


ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.


ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದು ಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.


ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.


ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.


[ದೇವರು ನುಡಿದದ್ದು -] ಕ್ಲುಪ್ತಕಾಲವು ಬಂದಾಗ ನಾನೇ ನೀತಿಯಿಂದ ತೀರ್ಪುಕೊಡುವೆನು.


ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇವಿುನ ಪೌಳಿಗೋಡೆಯನ್ನು ಕಟ್ಟಿಸು.


ದೇವರು ಮೋಶೆಗೆ ಮತ್ತೂ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು. ಇದು ಸದಾಕಾಲಕ್ಕೂ ನನ್ನ ಹೆಸರು; ಇದು ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಬೆಟ್ಟಗಳು ಉಂಟಾಗುವದಕ್ಕಿಂತ, ಭೂವಿುಯೂ ಅದರ ದೇಶಗಳೂ ನಿರ್ಮಾಣವಾಗುವದಕ್ಕಿಂತ ಮುಂಚಿನಿಂದ ಯುಗಯುಗಾಂತರಗಳಲ್ಲಿಯೂ ನೀನೇ ದೇವರು.


ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.


ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲ್ಪಡುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು