Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:18 - ಕನ್ನಡ ಸತ್ಯವೇದವು J.V. (BSI)

18 ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ. ಮುಂದೆ ಹುಟ್ಟುವ ಪ್ರಜೆಯು ಯಾಹುವನ್ನು ಕೊಂಡಾಡುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ, ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮುಂದಣ ಸಂತತಿಗಿದು ಶಾಸನವಾಗಿರಲಿ I ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮುಂದಿನ ತಲೆಮಾರುಗಳವರಿಗಾಗಿ ಇವುಗಳನ್ನು ಬರೆದಿಡಿ. ಮುಂದಿನ ಕಾಲದಲ್ಲಿ ಅವರು ಯೆಹೋವನನ್ನು ಸ್ತುತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದು ಮುಂದಿನ ಸಂತತಿಗೋಸ್ಕರ ಲಿಖಿತವಾಗಿರಲಿ; ಹುಟ್ಟಲಿಕ್ಕಿರುವ ಜನರು ಯೆಹೋವ ದೇವರನ್ನು ಸ್ತುತಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:18
21 ತಿಳಿವುಗಳ ಹೋಲಿಕೆ  

ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.


ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು.


ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ದಾನಿಯೇಲನಾದ ನಾನು ಶಾಸ್ತ್ರಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮು ಹಾಳುಬಿದ್ದಿರಬೇಕಾದ ಪೂರ್ಣಕಾಲದ ವರುಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದು


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.


ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.


ಭೂಮ್ಯಾಕಾಶಗಳೂ ಸಮುದ್ರಗಳೂ ಜಲಚರಗಳೂ ಆತನನ್ನು ಕೊಂಡಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು