Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:19 - ಕನ್ನಡ ಸತ್ಯವೇದವು J.V. (BSI)

19 ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂವಿುಯನ್ನು ದೃಷ್ಟಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಭೂಲೋಕವನು ವೀಕ್ಷಿಸಿದನು ಪ್ರಭು ಪರಲೋಕದಿಂದ I ದೃಷ್ಟಿಸಿದನು ತನ್ನ ಉನ್ನತ ಪವಿತ್ರಸ್ಥಾನದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನು ಉನ್ನತದಲ್ಲಿರುವ ತನ್ನ ಪರಿಶುದ್ಧ ಸ್ಥಳದಿಂದ ಕೆಳಗೆ ನೋಡುತ್ತಾನೆ. ಆತನು ಪರಲೋಕದಿಂದ ಭೂಮಿಯನ್ನು ನೋಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಉನ್ನತವಾದ ಪವಿತ್ರ ಸ್ಥಾನದಿಂದ ಕೆಳಕ್ಕೆ ನೋಡಿದ್ದಾರೆ; ಅವರು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:19
10 ತಿಳಿವುಗಳ ಹೋಲಿಕೆ  

ನೀನು ನಿನ್ನ ಪರಿಶುದ್ಧವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ ನಿನ್ನ ಜನರಾದ ಇಸ್ರಾಯೇಲ್ಯರನ್ನೂ ಹಾಲೂ ಜೇನೂ ಹರಿಯುವ ದೇಶವೆಂದು ನೀನು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂವಿುಯನ್ನೂ ಆಶೀರ್ವದಿಸು ದೇವರೇ ಎಂದು ಹೇಳಬೇಕು.


ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ


ದೇವರು ಉನ್ನತಾಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು!


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು; ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು; ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.


ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು