ಕೀರ್ತನೆಗಳು 102:26 - ಕನ್ನಡ ಸತ್ಯವೇದವು J.V. (BSI)26 ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತೀ; ಅವು ಮಾರ್ಪಡುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಲೋಕವೂ ಆಕಾಶವೂ ಕೊನೆಗೊಳುತ್ತವೆ. ನೀನಾದರೊ ಶಾಶ್ವತವಾಗಿರುವೆ! ಅವು ಬಟ್ಟೆಗಳಂತೆ ಹಳೆಯದಾಗುತ್ತವೆ. ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ. ಅವುಗಳೆಲ್ಲಾ ಬದಲಾಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವು ನಾಶವಾಗುವುವು; ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. ಅವುಗಳೆಲ್ಲಾ ವಸ್ತ್ರದ ಹಾಗೆ ಹಳೆಯದಾಗುವುದು; ಅಂಗಿಯ ಹಾಗೆ ಅವುಗಳನ್ನು ಬದಲಾಯಿಸುವಿರಿ; ಅವು ತೆಗೆದುಹಾಕಲಾಗುವುದು. ಅಧ್ಯಾಯವನ್ನು ನೋಡಿ |