Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:27 - ಕನ್ನಡ ಸತ್ಯವೇದವು J.V. (BSI)

27 ನೀನಾದರೋ ಏಕರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದುಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀನಾದರೋ ಏಕರೀತಿಯಾಗಿರುತ್ತಿ; ನಿನ್ನ ವರ್ಷಗಳು ಮುಗಿದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನೀನಂತೂ ಬದಲಾಗದೆ ಇರುವೆಯಯ್ಯಾ I ನಿನ್ನ ವರುಷಗಳಿಗೆ ಮುಗಿವೇ ಇಲ್ಲವಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದೇವರೇ, ನೀನಾದರೋ ಎಂದಿಗೂ ಬದಲಾಗುವುದಿಲ್ಲ. ನೀನು ಎಂದೆಂದಿಗೂ ಜೀವಿಸುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:27
8 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ; ಆದದರಿಂದ ಯಾಕೋಬ ಸಂತತಿಯವರೇ, ನೀವು ನಾಶವಾಗಲಿಲ್ಲ.


ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.


ಸಾವಿರ ವರುಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನಿನ ದಿನದಂತೆಯೂ ರಾತ್ರಿಯ ಜಾವದಂತೆಯೂ ಅವೆ.


ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರುಷಗಳು ಅಸಂಖ್ಯಾತವಾಗಿವೆ.


ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು