Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:4 - ಕನ್ನಡ ಸತ್ಯವೇದವು J.V. (BSI)

4 ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಿಸಿಲಿಗೆ ಬಾಡಿದ ಹುಲ್ಲಿನಂತಿದೆ ಎನ್ನೆದೆ I ತಿಂಡಿತೀರ್ಥವನುಣ್ಣಲೂ ನಾ ಮರೆತುಹೋದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನಿರ್ಬಲನಾಗಿ ಒಣಗಿಹೋಗುತ್ತಿರುವ ಹುಲ್ಲಿನಂತಿದ್ದೇನೆ. ನಾನು ಊಟವನ್ನೂ ಮರೆತುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಹೃದಯವು ಬಾಡಿಹೋಗಿ ಹುಲ್ಲಿನ ಹಾಗೆ ಒಣಗಿಹೋಗಿದೆ; ನಾನು ಊಟಮಾಡುವುದಕ್ಕೆ ಸಹ ಮರೆತುಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:4
21 ತಿಳಿವುಗಳ ಹೋಲಿಕೆ  

ಯೆಹೋವನ ಶ್ವಾಸವು ಅದರ ಮೇಲೆ ಬೀಸುವದರಿಂದ ಹುಲ್ಲು ಒಣಗಿಹೋಗುವದು, ಹೂವು ಬಾಡಿ ಹೋಗುವದು. ಜನವು ಹುಲ್ಲೇ ಹುಲ್ಲು!


ಅವರು ಹುಲ್ಲಿನಂತೆ ಬೇಗ ಒಣಗಿ ಹೋಗುವರು; ಸೊಪ್ಪಿನ ಪಲ್ಯದಂತೆ ಬಾಡಿಹೋಗುವರು.


ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.


ಆಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿವಿುತ್ತ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.


ಅವನು ಮೂರು ದಿವಸ ಕಣ್ಣುಕಾಣದೆ ಏನೂ ತಿನ್ನಲಿಲ್ಲ; ಏನೂ ಕುಡಿಯಲಿಲ್ಲ.


ನನ್ನ ಆತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ.


ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ.


ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿದ ಹುಲ್ಲಿನಂತಿದ್ದೇನೆ.


ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ವಿುಶ್ರವಾಯಿತು.


ನಿಂದೆಯಿಂದ ಖಿನ್ನನಾಗಿ ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.


ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೊನ್ ಪರ್ವತ, ವಿುಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.


ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವದು.


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ಸರ್ವಶಕ್ತನ ಬಾಣಗಳು ನನ್ನಲ್ಲಿ ನಾಟಿರುತ್ತವೆ; ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ಅವನ ಮನೆಯ ಹಿರೀಸೇವಕರು ಅವನನ್ನು ಎಬ್ಬಿಸುವದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.


ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೇಯುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು