Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:8 - ಕನ್ನಡ ಸತ್ಯವೇದವು J.V. (BSI)

8 ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ, ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ವೈರಿಗಳು ದಿನವಿಡೀ ನನ್ನ ನಿಂದಿಸುತ್ತಿಹರು I ದ್ವೇಷಿಗಳು ನನ್ನ ಹೆಸರೆತ್ತಿ ಶಪಿಸುತ್ತಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ವೈರಿಗಳು ನನಗೆ ಅವಮಾನ ಮಾಡುತ್ತಲೇ ಇರುವರು. ಅವರು ನನ್ನನ್ನು ದೃಷ್ಟಾಂತಮಾಡಿ ಶಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರೆಲ್ಲರು ನನಗೆ ವಿರೋಧವಾಗಿ ಶಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:8
15 ತಿಳಿವುಗಳ ಹೋಲಿಕೆ  

ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ ಎಂದು ಶಪಿಸುವರು;


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವದನ್ನೂ ಜ್ಞಾಪಿಸಿಕೋ.


ನಿಂದೆಯಿಂದ ಖಿನ್ನನಾಗಿ ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.


ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ ಹೊಯ್ದಾಡುತ್ತಾ ನರಳುತ್ತೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.


ಅನ್ಯಜನಗಳು ದೊಂಬಿಮಾಡುವದೂ ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯೋಚಿಸುವದೂ ಯಾಕೆ?


ಯಾಕಂದರೆ ಕ್ರಿಸ್ತನು ಸಹ ತನ್ನ ಸುಖವನ್ನು ನೋಡಿಕೊಳ್ಳಲಿಲ್ಲ. ದೇವರೇ, ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಬಂದವು ಎಂಬದಾಗಿ ಬರೆದಿರುವಂತೆ ಆತನಿಗೆ ಸಂಭವಿಸಿತಲ್ಲಾ.


ಆದರೆ ಅವರಲ್ಲಿ ದುರ್ಬುದ್ಧಿ ತುಂಬಿದ್ದದರಿಂದ - ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು - ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆಹೋದೀತು ಎಂದು ಹೇಳಿಕೊಳ್ಳುತ್ತಾರೆ.


ಹಳೆಯ ದಿನಗಳನ್ನೂ ಪುರಾತನ ವರುಷಗಳನ್ನೂ ಯೋಚಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು