Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:14 - ಕನ್ನಡ ಸತ್ಯವೇದವು J.V. (BSI)

14 ಆತನು ನಮ್ಮ ಪ್ರಕೃತಿಯನ್ನು ಬಲ್ಲನು; ನಾವು ಧೂಳಿಯಾಗಿದ್ದೇವೆಂಬದನ್ನು ನೆನಪುಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಏಕೆನೆ, ನಮ್ಮ ಸ್ವಭಾವವನು ಆತನು ಬಲ್ಲ I ನಾವು ಹುಡಿಮಣ್ಣೆಂದವನಿಗೆ ತಿಳಿದಿದೆಯಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನು ನಮ್ಮನ್ನು ಸಂಪೂರ್ಣವಾಗಿ ಬಲ್ಲನು. ನಾವು ಮಣ್ಣಿನಿಂದ ನಿರ್ಮಾಣಗೊಂಡದ್ದೂ ಆತನಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ನಮ್ಮ ಪ್ರಕೃತಿಯನ್ನು ಬಲ್ಲವರಾಗಿದ್ದಾರೆ; ನಾವು ಧೂಳಾಗಿದ್ದೇವೆಂದು ಅವರು ನೆನಪುಮಾಡಿ ಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:14
10 ತಿಳಿವುಗಳ ಹೋಲಿಕೆ  

ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ನೀನು ನನ್ನನ್ನು ಜೇಡಿಮಣ್ಣಿನಿಂದಲೋ ಎಂಬಂತೆ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರಿಗಿ ಮಣ್ಣಾಗುವಂತೆ ಮಾಡುವಿಯಾ?


ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ ಎಂಥಾ ವ್ಯರ್ಥಕ್ಕಾಗಿಯೇ ಮನುಷ್ಯರನ್ನು ನಿರ್ಮಿಸಿದ್ದೀ ಎಂದೂ ಜ್ಞಾಪಿಸಿಕೋ.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ನೀನು ನನ್ನ ಅಪರಾಧವನ್ನು ಕ್ಷವಿುಸಿ ನನ್ನ ದೋಷವನ್ನು ಏಕೆ ಪರಿಹರಿಸುವದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.


ಅಯ್ಯೋ, ನೀವು ಎಂಥಾ ಮೂರ್ಖರು! ಕುಂಬಾರನು ಮಣ್ಣೆನಿಸಿಕೊಂಡಾನೇ? ಕಾರ್ಯವು ಕರ್ತೃವನ್ನು ಕುರಿತು ಅವನು ನನ್ನನ್ನು ಮಾಡಲಿಲ್ಲ ಎಂದುಕೊಂಡೀತೇ? ನಿರ್ಮಿತವಾದದ್ದು ನಿರ್ಮಿಸಿದವನ ವಿಷಯವಾಗಿ ಅವನಿಗೆ ವಿವೇಕವಿಲ್ಲ ಎಂದೀತೇ?


ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ?


ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು