Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:19 - ಕನ್ನಡ ಸತ್ಯವೇದವು J.V. (BSI)

19 ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು I ಎಲ್ಲದರ ಮೇಲೆ ನಡೆಸುತಿಹನು ರಾಜ್ಯಾಡಳಿತವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನ ಸಿಂಹಾಸನವು ಪರಲೋಕದಲ್ಲಿದೆ. ಆತನು ಸಮಸ್ತವನ್ನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಪರಲೋಕದಲ್ಲಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ, ಅವರ ಸಾಮ್ರಾಜ್ಯದ ಆಳಿಕೆಯು ಎಲ್ಲರ ಮೇಲೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:19
16 ತಿಳಿವುಗಳ ಹೋಲಿಕೆ  

ಪರಾತ್ಪರನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಅಧಿರಾಜನಾಗಿದ್ದಾನೆ.


ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು ನ್ಯಾಯವಿಚಾರಿಸುವದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನಂದರೆ - ಪರಲೋಕದೊಳಗೆ ಮಹತ್ವವುಳ್ಳ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾನೆ.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ಯೆಹೋವನು ಹೀಗನ್ನುತ್ತಾನೆ - ಆಕಾಶವು ನನಗೆ ಸಿಂಹಾಸನ, ಭೂವಿುಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಪರಲೋಕದಲ್ಲಿ ಆಸನಾರೂಢನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.


ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.


ಯೆಹೋವಾ, ಮಹಿಮಪ್ರತಾಪ ವೈಭವ ಪರಾಕ್ರಮಪ್ರಭಾವಗಳು ನಿನ್ನವು; ಭೂಮ್ಯಾಕಾಶಗಳಲ್ಲಿರುವದೆಲ್ಲಾ ನಿನ್ನದೇ. ಯೆಹೋವನೇ, ರಾಜ್ಯವು ನಿನ್ನದು; ನೀನು ಮಹೋನ್ನತನಾಗಿ ಸರ್ವವನ್ನೂ ಆಳುವವನಾಗಿರುತ್ತೀ.


ಪ್ರಭಾವೈಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ; ನೀನು ಸರ್ವಾಧಿಕಾರಿಯು; ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ; ಎಲ್ಲಾ ದೊಡ್ಡಸ್ತಿಕೆಗೂ ಶಕ್ತಿಗೂ ನೀನೇ ಮೂಲನು.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು