ಕೀರ್ತನೆಗಳು 103:4 - ಕನ್ನಡ ಸತ್ಯವೇದವು J.V. (BSI)4 ನಿನ್ನ ಜೀವವನ್ನು ನಾಶದಿಂದ ತಪ್ಪಿಸುವವನೂ ಪ್ರೀತಿಕೃಪೆಗಳೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಉಳಿಸುವನು ಪಾತಾಳದ ಕೂಪದಿಂದ ನನ್ನನು I ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆತನು ನಮ್ಮ ಜೀವವನ್ನು ನಾಶನದಿಂದ ರಕ್ಷಿಸಿ ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರು ನಿಮ್ಮ ಜೀವವನ್ನು ಪಾತಾಳದಿಂದ ವಿಮೋಚಿಸುವರು; ಪ್ರೀತಿ ಅನುಕಂಪವನ್ನು ನಿನಗೆ ಕಿರೀಟವಾಗಿ ಶೃಂಗರಿಸುವರು. ಅಧ್ಯಾಯವನ್ನು ನೋಡಿ |