Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:7 - ಕನ್ನಡ ಸತ್ಯವೇದವು J.V. (BSI)

7 ಆತನು ಮೋಶೆಗೆ ತನ್ನ ಮಾರ್ಗವನ್ನೂ ಇಸ್ರಾಯೇಲ್ಯರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಮೋಶೆಗೆ ತನ್ನ ಮಾರ್ಗವನ್ನೂ, ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತೋರಿಸಿದಾತ ತನ್ನ ಮಾರ್ಗವನು ಮೋಶೆಗೆ I ತನ್ನ ಮಹತ್ಕಾರ್ಯಗಳನು ಇಸ್ರಯೇಲರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ತನ್ನ ಕಟ್ಟಳೆಗಳನ್ನು ಮೋಶೆಗೆ ಉಪದೇಶಿಸಿದನು; ತನ್ನ ಮಹತ್ಕಾರ್ಯಗಳನ್ನು ಇಸ್ರೇಲರಿಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ತಮ್ಮ ಮಾರ್ಗಗಳನ್ನು ಮೋಶೆಗೂ, ತಮ್ಮ ಕ್ರಿಯೆಗಳನ್ನು ಇಸ್ರಾಯೇಲರಿಗೂ ಪ್ರಕಟಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:7
19 ತಿಳಿವುಗಳ ಹೋಲಿಕೆ  

ನನಗೆ ನಿನ್ನ ದಯೆ ದೊರಕಿದ್ದಾದರೆ ನಾನು ನಿನ್ನನ್ನು ಬಲ್ಲವನಾಗಿರುವಂತೆ ನಿನ್ನ ಮಾರ್ಗವನ್ನು ನನಗೆ ತೋರಿಸು; ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿದಿರುವದು; ಈ ಜನವು ನಿನ್ನ ಪ್ರಜೆಯೆಂದು ಜ್ಞಾಪಕಮಾಡಿಕೋ ಎಂದು ಅರಿಕೆಮಾಡಿದನು.


ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ; ತನ್ನ ನಿಯಮವಿಧಿಗಳನ್ನು ಇಸ್ರಾಯೇಲ್ಯರಿಗೆ ಪ್ರಕಟಿಸುತ್ತಾನೆ.


ಆತನ ಕಾರ್ಯಗಳನ್ನೂ ಆತನು ತಮ್ಮೆದುರಿನಲ್ಲಿ ನಡಿಸಿದ ಅದ್ಭುತಗಳನ್ನೂ ಮರೆತುಬಿಟ್ಟರು.


ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ ಆಜ್ಞಾವಿಧಿಧರ್ಮಗಳನ್ನು ಕಲಿಸಿದಿ.


ಕುರುಬನು ಕುರಿಹಿಂಡನ್ನು ಹೇಗೋ ಹಾಗೆ ನೀನು ಮೋಶೆ ಆರೋನರ ಮುಖಾಂತರ ನಿನ್ನ ಪ್ರಜೆಯನ್ನು ಕರೆದೊಯ್ದಿ.


ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಬಳಿಕೆಯಾಗಿದ್ದನು.


ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.


ಆತನು ಯಾಕೋಬವಂಶದಲ್ಲಿ ಕಟ್ಟಳೆಯನ್ನಿಟ್ಟು ಇಸ್ರಾಯೇಲ್ಯರಿಗೆ ನಿಯಮಮಾಡಿ ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನಂದರೆ - ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;


ಜನರು ದೂರದಲ್ಲಿ ನಿಂತಿದ್ದರು; ಮೋಶೆಯೋ ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಸೇರಿದನು.


ಯೆಹೋವನು ಸೀನಾಯಿಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು - ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.


ಜನರೆಲ್ಲರೂ - ಯೆಹೋವನು ಹೇಳಿದಂತೆಯೇ ಮಾಡುವೆವು ಎಂದು ಒಗ್ಗಟ್ಟಾಗಿ ಪ್ರತ್ಯುತ್ತರ ಕೊಡಲಾಗಿ ಮೋಶೆ ಯೆಹೋವನ ಬಳಿಗೆ ಹೋಗಿ ಅವರ ಮಾತುಗಳನ್ನು ಆತನಿಗೆ ಅರಿಕೆ ಮಾಡಿದನು.


ಕೆಂಪುಸಮುದ್ರದ ಬಳಿಯಲ್ಲಿ ಘೋರ ಕೃತ್ಯಗಳನ್ನೂ ನಡಿಸಿದ ತಮ್ಮ ರಕ್ಷಕನಾದ ದೇವರನ್ನು ಮರೆತೇಬಿಟ್ಟರು.


ನನ್ನ ಸೇವಕನಾದ ಮೋಶೆ ಅಂಥವನಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನು.


ಆತನು ಅನ್ಯಜನಗಳ ಸ್ವಾಸ್ತ್ಯವನ್ನು ತನ್ನ ಪ್ರಜೆಗೆ ಕೊಡುವದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು