Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:1 - ಕನ್ನಡ ಸತ್ಯವೇದವು J.V. (BSI)

1 ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ಕೃಷ್ಟನು; ಪ್ರಭಾವಮಹತ್ವಗಳಿಂದ ಭೂಷಿತನಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಭಜಿಸು ನನ್ನ ಮನವೇ, ಭಜಿಸು, ಪ್ರಭುವನು I ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I ಮಹಿಮೆ ಪ್ರತಾಪಗಳಿಂದ ಭೂಷಿತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಯೆಹೋವನೇ, ನನ್ನ ದೇವರೇ, ನೀನು ಬಹಳ ದೊಡ್ಡವನು! ನೀನು ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ನನ್ನ ದೇವರಾದ ಯೆಹೋವ ದೇವರೇ, ನೀವು ಬಹಳ ದೊಡ್ಡವರಾಗಿದ್ದೀರಿ; ಘನತೆಯಿಂದಲೂ, ಪ್ರಭಾವದಿಂದಲೂ ಭೂಷಿತನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:1
16 ತಿಳಿವುಗಳ ಹೋಲಿಕೆ  

ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.


ಯೆಹೋವನು ಮಹೋನ್ನತನೂ ಮಹಾಸ್ತುತಿಪಾತ್ರನೂ ಆಗಿದ್ದಾನೆ; ಆತನ ಮಹತ್ತು ಅಪಾರವಾದದ್ದು.


ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲಸೌಂದರ್ಯಗಳೂ ಇರುತ್ತವೆ.


ಧರ್ಮವನ್ನು ವಜ್ರ ಕವಚವನ್ನಾಗಿ ತೊಟ್ಟು ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು ಆಗ್ರಹವನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ.


ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನರಿಕೆ ಮಾಡಿ ಬಿನ್ನವಿಸಿದೆನು - ಓ ಕರ್ತನೇ, ಮಹೋನ್ನತನೂ ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ಪಾಪಾತ್ಮರು ಭೂಲೋಕದಲ್ಲಿ ಮುಗಿದು ಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯಾಹುವಿಗೆ ಸ್ತೋತ್ರ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.


ಯೆಹೋವನೇ, ನನ್ನ ದೇವರೇ, ನಿನ್ನ ಮರೆಹೊಕ್ಕಿದ್ದೇನೆ; ಹಿಂದಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾವಿುಯೇ, ನೀನು ಅನಾದಿಯಿಂದಿದ್ದೀಯಲ್ಲಾ; ನಾವು ಸಾಯೆವು. ಯೆಹೋವನೇ, [ನಮ್ಮ] ನ್ಯಾಯತೀರ್ಪಿಗಾಗಿ ಅವರನ್ನು ನೇವಿುಸಿದ್ದೀ; ಶರಣನೇ, [ನಮ್ಮ] ಶಿಕ್ಷೆಗಾಗಿ ಅವರನ್ನು ನಿಲ್ಲಿಸಿದ್ದೀ.


ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು, ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು; ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.


ಯೆಹೋವನು ಮಹಾದೇವರೂ ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು