Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:14 - ಕನ್ನಡ ಸತ್ಯವೇದವು J.V. (BSI)

14 ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೊಳೆಸುವೆ ಹುಲ್ಲನ್ನು ದನಕರುಗಳಿಗೋಸ್ಕರ I ಬೆಳೆಸುವೆ ಪೈರನು ನರಮಾನವರಿಗೋಸ್ಕರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಪಶುಗಳಿಗೋಸ್ಕರ ಹುಲ್ಲನ್ನು ಬೆಳೆಯ ಮಾಡುವೆ. ನಾವು ದುಡಿದು ಬೆಳೆಸುವುದಕ್ಕಾಗಿ ಸಸಿಗಳನ್ನು ಕೊಟ್ಟಿರುವೆ. ಅವು ಬೆಳೆದು ನಮಗೆ ಆಹಾರವನ್ನು ಒದಗಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ಪಶುಗಳಿಗೋಸ್ಕರ ಹುಲ್ಲನ್ನೂ, ಮನುಷ್ಯನ ವ್ಯವಸಾಯಕ್ಕೋಸ್ಕರ ಪಲ್ಯಗಳನ್ನೂ ಮೊಳೆಸುತ್ತಾರೆ. ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:14
18 ತಿಳಿವುಗಳ ಹೋಲಿಕೆ  

ಎಲ್ಲಾ ಜೀವಿಗಳಿಗೂ ಆಹಾರಕೊಡುವವನು ಆತನೇ; ಆತನ ಕೃಪೆಯು ಶಾಶ್ವತವಾದದ್ದು.


ಭೂವಿುಯು ಅನ್ನವನ್ನು ಕೊಡುವದು, ಅದರ ಕೆಳಭಾಗವೋ ಬೆಂಕಿಬಿದ್ದಂತೆ ಹಾಳಾಗಿರುವದು.


ಹೀಗಿರಲಾಗಿ ನೆಡುವವನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.


ಭೂವಿುಯ ಮೇಲೆ ತಿರುಗುವ ಎಲ್ಲಾ ಜೀವಜಂತುಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಪೈರುಗಳನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.


ಆ ಭೂವಿುಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಹುಟ್ಟುವವು. ಹೊಲದ ಬೆಳೆಯನ್ನು ಅನುಭವಿಸುವಿ.


ವೃಷ್ಟಿಯ ಪ್ರವಾಹಕ್ಕೆ ಕಾಲುವೆಯನ್ನೂ ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಯಾರು ಕಡಿದರು?


ಭೂಜಂತುಗಳೇ, ಅಂಜಬೇಡಿರಿ; ಕಾಡಿನ ಕಾವಲಲ್ಲಿ ಹುಲ್ಲು ಮೊಳೆಯುವದು, ಮರವು ಹಣ್ಣುಬಿಡುವದು, ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.


ಅಹಾಬನು ಅವನಿಗೆ - ನಾವು ದೇಶಸಂಚಾರಮಾಡುತ್ತಾ ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವವು; ಇಲ್ಲವಾದರೆ ಎಲ್ಲಾ ಸತ್ತುಹೋಗುವವು ಎಂದು ಹೇಳಿ


ಮತ್ತು ಯೆಹೋವದೇವರು ನೋಟಕ್ಕೆ ರಮ್ಯವಾಗಿಯೂ ಊಟಕ್ಕೆ ಅನುಕೂಲವಾಗಿಯೂ ಇರುವ ಎಲ್ಲಾ ತರದ ಮರಗಳನ್ನು ಆ ಭೂವಿುಯಲ್ಲಿ ಬೆಳೆಯ ಮಾಡಿದನು. ಅದಲ್ಲದೆ ಆ ವನಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ವೃಕ್ಷವನ್ನೂ ಬೆಳೆಯಿಸಿದನು.


ನೀನು ಭೂವಿುಯನ್ನು ವ್ಯವಸಾಯ ಮಾಡಿದರೂ ಇದು ಇನ್ನು ಮುಂದೆ ನಿನಗೆ ಫಲಿಸುವದಿಲ್ಲ. ನೀನು ಭೂಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಿರುವಿ ಅಂದನು.


ಯೆಹೋವದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ಗಿಡವಾದರೂ ಭೂವಿುಯಲ್ಲಿ ಇರಲಿಲ್ಲ, ಯಾವ ಪಲ್ಯವೂ ಹುಟ್ಟಿರಲಿಲ್ಲ. ಯಾಕಂದರೆ ಯೆಹೋವದೇವರು ಭೂವಿುಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ; ಭೂವಿುಯನ್ನು ವ್ಯವಸಾಯ ಮಾಡುವದಕ್ಕೆ ಮನುಷ್ಯನೂ ಇರಲಿಲ್ಲ.


ಅಡವಿಯಲ್ಲಿ ದನಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.


ಹುಲ್ಲನ್ನು [ಕೊಯ್ದು] ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವದು; ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು