Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:17 - ಕನ್ನಡ ಸತ್ಯವೇದವು J.V. (BSI)

17 ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಗೂಡುಕಟ್ಟಿಕೊಳ್ಳುವುವು ಹಕ್ಕಿಗಳಾ ಮರಗಳಲಿ I ವಾಸಮಾಡುವುವು ಕೊಕ್ಕರೆಗಳು ತುರಾಯಿಮರಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪಕ್ಷಿಗಳು ಗೂಡುಗಳನ್ನು ಆ ಮರಗಳಲ್ಲಿ ಕಟ್ಟಿಕೊಳ್ಳುತ್ತವೆ. ದೊಡ್ಡ ಕೊಕ್ಕರೆಗಳು ತುರಾಯಿ ಮರಗಳಲ್ಲಿ ಜೀವಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ತುರಾಯಿ ಗಿಡಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:17
8 ತಿಳಿವುಗಳ ಹೋಲಿಕೆ  

ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.


ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ, ಬೆಳೆದ ಮೇಲೆ ಕಾಯಿಪಲ್ಯದ ಗಿಡಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ; ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.


ನೀನು ಹದ್ದಿನಂತೆ ಮೇಲಕ್ಕೆ ಏರಿದರೂ ನಿನ್ನ ಗೂಡು ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು; ಇದು ಯೆಹೋವನ ನುಡಿ.


ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ ಆ ವೃಕ್ಷವು ನೀನೇ;


ಎಲ್ಲಾ ಆಕಾಶಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಮಾಡಿಕೊಂಡಿದ್ದವು; ಸಮಸ್ತಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳನ್ನು ಈಯುತ್ತಿದ್ದವು; ಮಹಾಜನಾಂಗಗಳೆಲ್ಲಾ ಅದರ ನೆರಳನ್ನು ಆಶ್ರಯಿಸಿದ್ದವು.


ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು!


ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯವಿುತ ಕಾಲಗಳನ್ನು ತಿಳಿದುಕೊಂಡಿದೆ, ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ; ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು