Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:3 - ಕನ್ನಡ ಸತ್ಯವೇದವು J.V. (BSI)

3 ಜಲರಾಶಿಗಳ ಮೇಲೆ ಉಪ್ಪರಿಗೆಗಳನ್ನು ಕಟ್ಟಿಕೊಂಡಿದ್ದೀ; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿದ್ದೀ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿರ್ಮಿಸಿರುವೆ ನಿನ್ನ ಭವನವನು ಜಲದ ಮೇಲೆ I ಮಾಡುವೆ ಸಂಚಾರ ಮಾರುತನ ರೆಕ್ಕೆಗಳ ಮೇಲೆ I ನಿನಗೆ ರಥವಾಹನಗಳು ಆ ಮುಗಿಲು ಮೋಡಗಳೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಮನೆಯನ್ನು ಅವುಗಳ ಮೇಲೆ ಕಟ್ಟಿರುವೆ. ದಟ್ಟವಾದ ಮೋಡಗಳನ್ನು ರಥಗಳನ್ನಾಗಿ ಮಾಡಿಕೊಂಡು ಗಾಳಿಯ ರೆಕ್ಕೆಗಳ ಮೇಲೆ ಆಕಾಶದಲ್ಲಿ ಸಂಚರಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರು ನೀರಿನ ಮೇಲೆ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾರೆ. ಮೋಡಗಳನ್ನು ತಮ್ಮ ರಥವಾಗಿ ಮಾಡುತ್ತಾರೆ. ಗಾಳಿಯ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:3
10 ತಿಳಿವುಗಳ ಹೋಲಿಕೆ  

ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತಾಗಿ ಕಟ್ಟಿಕೊಂಡು ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ; ಸಮುದ್ರದ ನೀರನ್ನು ಕರೆದು ಭೂಮಂಡಲದ ಮೇಲೆ ಹೊಯ್ಯುತ್ತಾನೆ; ಯೆಹೋವನೆಂಬದೇ ಆತನ ನಾಮಧೇಯ.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.


ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ದೂಳು.


ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡೇನಂದರೆ


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು.


ಯೆಶುರೂನೇ, ನಿಮ್ಮ ದೇವರಿಗೆ ಸಮಾನನು ಯಾವನೂ ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.


ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು