Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:30 - ಕನ್ನಡ ಸತ್ಯವೇದವು J.V. (BSI)

30 ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. ಭೂವಿುಯನ್ನು ನೂತನಪಡಿಸುತ್ತಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನೀ ಉಸಿರನ್ನೂದಲು ಹೊಸದಾಗುವುವು I ಪುನಶ್ಚೇತನಗೊಳ್ಳುವುದು ಜಗವೆಲ್ಲವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿನ್ನ ಜೀವಶ್ವಾಸವನ್ನು ಊದುವಾಗ ಅವು ಸೃಷ್ಟಿಯಾಗುತ್ತವೆ. ನೀನು ಭೂಮಿಯನ್ನು ಮತ್ತೆ ನೂತನ ಪಡಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀವು ನಿಮ್ಮ ಶ್ವಾಸವನ್ನು ಕಳುಹಿಸಲು, ಜೀವಜಂತುಗಳು ಹುಟ್ಟುತ್ತವೆ; ಹೀಗೆ ನೀವು ಭೂಮಿಯನ್ನು ನೂತನಗೊಳಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:30
14 ತಿಳಿವುಗಳ ಹೋಲಿಕೆ  

ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನ ಶ್ವಾಸದಿಂದುಂಟಾಗಿದೆ.


ಆಗ ಅತನು ನನಗೆ - ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ನುಡಿ; ಶ್ವಾಸವೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ ಎಂಬದಾಗಿ ಶ್ವಾಸಕ್ಕೆ ನುಡಿ ಎಂದು ಅಪ್ಪಣೆಕೊಡಲು ನಾನು ಅಪ್ಪಣೆಯಂತೆ ನುಡಿದೆನು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.


ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವದು, ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವದು.


ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.


ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಇಗೋ, ನೂತನಾಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆಬಾರದು.


ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.


ನಾನು ಸೃಷ್ಟಿಸುವ ನೂತನಾಕಾಶಮಂಡಲವೂ ನೂತನಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ಪ್ರತಿಪ್ರಾಣಿಯ ಪ್ರಾಣವೂ ಸಮಸ್ತಮನುಷ್ಯರ ಆತ್ಮಗಳೂ ಆತನ ಕೈಯಲ್ಲಿರುವವು.


ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಹೊಗಿಸುವೆನು; ನೀವು ಬದುಕುವಿರಿ.


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮವನ್ನು ಹೊದಿಸಿ ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು