Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:34 - ಕನ್ನಡ ಸತ್ಯವೇದವು J.V. (BSI)

34 ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಾನು ಹೇಳಿದ ಈ ವಿಷಯಗಳು ಆತನನ್ನು ಸಂತೋಷಗೊಳಿಸಲಿ. ನಾನಾದರೋ ಯೆಹೋವನಲ್ಲಿ ಸಂತೋಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದೇವರ ವಿಷಯವಾದ ನನ್ನ ಧ್ಯಾನವು ಮಧುರವಾಗಿರುವುದು; ನಾನು ಯೆಹೋವ ದೇವರಲ್ಲಿ ಸಂತೋಷ ಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:34
18 ತಿಳಿವುಗಳ ಹೋಲಿಕೆ  

ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ತಿರಿಗಿ ಹೇಳುತ್ತೇನೆ.


ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದ ಪಡುವವನಾಗಿ ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವನೋ ಅವನು ಎಷ್ಟೋ ಧನ್ಯನು.


ನನ್ನ ಆತ್ಮವು ನನ್ನ ರಕ್ಷಕನಾದ ದೇವರ ವಿಷಯದಲ್ಲಿ ಉಲ್ಲಾಸಗೊಂಡದೆ.


ಪರಾತ್ಪರನೇ, ನಿನ್ನಲ್ಲಿ ನಾನು ಸಂತೋಷಿಸಿ ಉತ್ಸಾಹಪಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು, ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು.


ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರ್ರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹಧ್ವನಿ ಮಾಡಿರಿ.


ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ; ಅವು ನನಗೆ ಬಹುಪ್ರಿಯವಾಗಿವೆ.


ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವದೆಂದು ತಿಳಿದುಕೋ; ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ಅವನು ಸಂಜೇವೇಳೆಯಲ್ಲಿ ಧ್ಯಾನಮಾಡುವದಕ್ಕೋಸ್ಕರ ಅಡವಿಗೆ ಹೋಗಿದ್ದಾಗ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವದನ್ನು ಕಂಡನು.


ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವದು; ಆತನಿಂದಾದ ರಕ್ಷಣೆಯ ನಿವಿುತ್ತ ಆನಂದಪಡುವೆನು.


ಆತನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.


ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಮೇಲೆ ನನ್ನ ಹೊಟ್ಟೆಯು ಕಹಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು