Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:9 - ಕನ್ನಡ ಸತ್ಯವೇದವು J.V. (BSI)

9 ಜಲರಾಶಿಗಳು ಬಂದು ಪುನಃ ಭೂವಿುಯನ್ನು ಮುಚ್ಚಿಕೊಳ್ಳದ ಹಾಗೆ ನೀನು ಮೇರೆಯನ್ನು ಗೊತ್ತುಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ, ನೀನು ಮೇರೆಗಳನ್ನು ಗೊತ್ತುಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಗೊತ್ತುಮಾಡಿರುವೆ ಆ ಜಲರಾಶಿಗೆ ಮೇರೆಯನು I ಅವು ಮತ್ತೆ ಮುಚ್ಚದಂತೆ ಮಾಡಿರುವೆ ಭೂಮಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಸಮುದ್ರಗಳಿಗೆ ಮೇರೆಗಳನ್ನು ಗೊತ್ತುಪಡಿಸಿರುವುದರಿಂದ ನೀರಿನಿಂದ ಭೂಮಿಯು ಮತ್ತೆಂದಿಗೂ ಆವೃತವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವು ದಾಟದ ಹಾಗೆಯೂ, ಭೂಮಿಯನ್ನು ಮುಚ್ಚುವುದಕ್ಕೆ ತಿರುಗಿ ಬಾರದ ಹಾಗೆಯೂ ನೀವು ಮೇರೆಯನ್ನು ಇಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:9
6 ತಿಳಿವುಗಳ ಹೋಲಿಕೆ  

ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಲಯದಂತಿದೆ; ಇಂಥಾ ಜಲಪ್ರಲಯವು ಭೂವಿುಯನ್ನು ತಿರಿಗಿ ಆವರಿಸುವದಿಲ್ಲವೆಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವದಿಲ್ಲ, ಗದರಿಸುವದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.


ಬೆಳಕುಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ ಸುತ್ತಲೂ ಮೇರೆಯನ್ನು ಹಾಕಿದ್ದಾನೆ.


ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂವಿುಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು