Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:12 - ಕನ್ನಡ ಸತ್ಯವೇದವು J.V. (BSI)

12 ಆತನು - ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿರುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು, “ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12-13 ಅಲ್ಪಸಂಖ್ಯಾತರೂ ಆಗಂತುಕರೂ ಅವರಾಗಿರಲು I ನಾಡಿಂದ ನಾಡಿಗೆ ರಾಜ್ಯದಿಂದ ರಾಜ್ಯಕೆ ಅಲೆಯುತ್ತಿರಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಬ್ರಹಾಮನ ಕುಟುಂಬವು ಚಿಕ್ಕದಾಗಿದ್ದಾಗ ಅವರು ಪ್ರಯಾಣಿಕರಂತೆ ಕಾನಾನಿನಲ್ಲಿ ವಾಸವಾಗಿದ್ದಾಗ, ಆತನು ಅವರಿಗೆ ಈ ವಾಗ್ದಾನವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:12
11 ತಿಳಿವುಗಳ ಹೋಲಿಕೆ  

ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಮಂದಿ ಎಂದು ಇಷ್ಟಪಟ್ಟು ಆದುಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಸ್ವಲ್ಪಮಂದಿಯಷ್ಟೆ.


ಯಾಕೋಬನು ಸಿಮೆಯೋನ್ ಲೇವಿಯರಿಗೆ - ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರು ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ; ಈ ದೇಶದವರು ಒಟ್ಟಾಗಿ ನನ್ನ ಮೇಲೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು ಅಲ್ಲವೇ ಎಂದು ಹೇಳಲು


ನಂಬಿಕೆಯಿಂದಲೇ ಅವನು ವಾಗ್ದಾತ್ತದೇಶಕ್ಕೆ ಬಂದಾಗ ಅಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಡೇರೆಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ನಾನು ನಿಮ್ಮಲ್ಲಿ ಪರದೇಶದವನೂ ಪರವಾಸಿಯೂ ಆಗಿದ್ದೇನಷ್ಟೆ. ತೀರಿಹೋಗಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ನಿಮ್ಮಲ್ಲಿ ನನ್ನ ಸ್ವಂತಕ್ಕೆ ಭೂವಿುಯನ್ನು ಕೊಡಬೇಕೆಂದು ಕೇಳಿಕೊಂಡನು.


ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.


ಆದದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಕ್ಕಳು ಹುಟ್ಟಿದರು.


ಇದರಲ್ಲಿ ಅವನಿಗೆ ಕಾಲಿಡುವಷ್ಟು ಭೂವಿುಯನ್ನು ಸ್ವಾಸ್ತ್ಯವಾಗಿ ಕೊಡದೆ ಅವನಿಗೆ ಮಕ್ಕಳು ಇನ್ನೂ ಇಲ್ಲದಿರುವಾಗ - ಈ ದೇಶವನ್ನು ನಿನಗೂ ನಿನ್ನ ಹಿಂದೆ ಬರುವ ನಿನ್ನ ಸಂತತಿಗೂ ಸ್ವಾಸ್ತ್ಯವಾಗಿ ಕೊಡುವೆನು ಎಂದು ಅವನಿಗೆ ವಾಗ್ದಾನ ಮಾಡಿದನು.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ; ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು ಆಶೀರ್ವದಿಸಿ ಸಂತಾನದಿಂದ ಹೆಚ್ಚಿಸಿದೆನಲ್ಲವೆ.


ನೀನು ಪ್ರವಾಸವಾಗಿರುವ ಕಾನಾನ್‍ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟು ಅವರಿಗೆ ದೇವರಾಗಿರುವೆನು ಅಂದನು.


ನಾನು ಅವರಿಗೆ - ನೀವು ಪ್ರವಾಸವಾಗಿರುವ ಕಾನಾನ್ ದೇಶವನ್ನು ನಿಮಗೇ ಕೊಡುವೆನೆಂಬದಾಗಿ ದೃಢವಾಗಿ ವಾಗ್ದಾನ ಮಾಡಿದೆನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು