Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:15 - ಕನ್ನಡ ಸತ್ಯವೇದವು J.V. (BSI)

15 ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನಾನಭಿಷೇಕಿಸಿದವರನಿದೋ ಮುಟ್ಟಬೇಡಿ I ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಾನು ಆರಿಸಿಕೊಂಡಿರುವ ಜನರಿಗೆ ಕೇಡುಮಾಡಬೇಡಿ. ನನ್ನ ಪ್ರವಾದಿಗಳಿಗೆ ಯಾವ ಕೆಟ್ಟದ್ದನ್ನೂ ಮಾಡಬೇಡಿ” ಎಂದು ಆತನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:15
14 ತಿಳಿವುಗಳ ಹೋಲಿಕೆ  

ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -


ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣದಂಡನೆಯಾಗುವದು ಎಂದು ಆಜ್ಞೆಮಾಡಿದನು.


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲ್ಯರ ಅರಸನನ್ನಾಗಿಯೂ ಅಬೇಲ್‍ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭೀಷೇಕಿಸು.


ದಾವೀದನು ಅವನಿಗೆ - ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವದಕ್ಕೆ ಏಕೆ ಭಯಪಡಲಿಲ್ಲ ಎಂದು ಹೇಳಿ


ಬೇತೇಲಿನ ವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ - ಅವನನ್ನು ಹಿಡಿಯಿರಿ ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು.


ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು. ಆಗ ಅವನ ಪಂಡಿತರೂ ಹೆಂಡತಿಯೂ ಅವನಿಗೆ - ಯಾವನ ಮುಂದೆ ನಿನ್ನ ಪತನವು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ ಅಂದರು.


ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.


ಅವನನ್ನು ಕರೆಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು ಎಂದು ಅಪ್ಪಣೆಕೊಡಲು


ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವಾಸ್ತ್ಯವನ್ನಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು