Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:19 - ಕನ್ನಡ ಸತ್ಯವೇದವು J.V. (BSI)

19 ಅವನು ತನ್ನ ಮಾತು ನೆರವೇರುವ ತನಕ ಯೆಹೋವನ ವಾಕ್ಯದಿಂದ ಶೋಧಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ತನ್ನ ಮಾತು ನೆರವೇರುವ ತನಕ ಯೆಹೋವನ ವಾಕ್ಯದಿಂದ ಶೋಧಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕ್ರಮೇಣ ಕೈಗೂಡಿತು ಜೋಸೆಫನು ನುಡಿದದ್ದು I ಪ್ರಭುವಿನ ವಾಣಿ ಕಂಡುಬಂದಿತು ಸತ್ಯವೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವನ ಪ್ರವಾದನೆಯು ನೆರವೇರುವ ತನಕ ಅವನು ಗುಲಾಮನಾಗಿದ್ದನು. ಯೋಸೇಫನು ಸತ್ಯವಂತನೆಂದು ಯೆಹೋವನ ಸಂದೇಶವು ನಿರೂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರ ಮುಂತಿಳಿಸಿದ ವಾಕ್ಯವು ನೆರವೇರುವವರೆಗೆ ಅವನು ದೇವರ ಮಾತಿನಿಂದ ಪರಿಶೋಧಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:19
8 ತಿಳಿವುಗಳ ಹೋಲಿಕೆ  

ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.


ಯೋಸೇಫನು ಫರೋಹನಿಗೆ - ತಾವು ಕಂಡ ಎರಡು ಕನಸುಗಳೂ ಒಂದೇ ವಿಷಯವಾದವುಗಳು. ದೇವರು ತಾನು ಮಾಡಬೇಕೆಂದಿರುವದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.


ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂತಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದುಬರಲಿ ಎಂದು ಈ ರಹಸ್ಯವು ನನಗೆ ವ್ಯಕ್ತವಾಗಿದೆ.


ದೇವರೇ, ನೀನೇ ನನ್ನ ಅರಸನು; ಯಾಕೋಬವಂಶಕ್ಕೆ ಜಯಪ್ರದನಾಗು.


ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ - [ಅರಸನೇ,] ಈ ಹೊತ್ತು ನನ್ನ ತಪ್ಪುಗಳನ್ನು ನೆನಸಿ ಸನ್ನಿಧಿಯಲ್ಲಿ ಅರಿಕೆ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು