Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:3 - ಕನ್ನಡ ಸತ್ಯವೇದವು J.V. (BSI)

3 ಆತನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೆಮ್ಮೆಪಡಿ, ನೆನೆದಾತನ ಶ್ರೀನಾಮ I ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನ ಪವಿತ್ರ ನಾಮದಲ್ಲಿ ಹೆಮ್ಮೆಪಡಿರಿ. ಯೆಹೋವನ ಆರಾಧಕರೇ, ಸಂತೋಷಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರ ಪರಿಶುದ್ಧ ನಾಮವನ್ನು ಹೊಗಳಿರಿ; ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:3
13 ತಿಳಿವುಗಳ ಹೋಲಿಕೆ  

ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂಬ ವೇದೋಕ್ತಿ ನೆರವೇರುವದಕ್ಕೆ ಇದರಿಂದ ಮಾರ್ಗವಾಯಿತು.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವದು; ಇದನ್ನು ದೀನರು ಕೇಳಿ ಸಂತೋಷಿಸುವರು.


ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಯಾಕಂದರೆ ನಿನ್ನ ಮರೆಹೊಗುವವರನ್ನು ನೀನು ಕೈಬಿಡುವವನಲ್ಲ.


ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು