Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:42 - ಕನ್ನಡ ಸತ್ಯವೇದವು J.V. (BSI)

42 ಹೀಗೆ ಆತನು ತನ್ನ ಪರಿಶುದ್ಧವಚನವನ್ನೂ ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಸ್ಮರಿಸಿಕೊಂಡನು ಪ್ರಭು ತನ್ನ ವಾಗ್ದಾನವನು I ತನ್ನ ದಾಸ ಅಬ್ರಹಾಮನಿಗೆ ಕೊಟ್ಟಾ ಮಾತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆತನು ತನ್ನ ಸೇವಕನಾದ ಆಬ್ರಹಾಮನಿಗೆ ತಾನು ಮಾಡಿದ ವಾಗ್ದಾನವನ್ನು ಜ್ಞಾಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಹೀಗೆ ದೇವರು ತಮ್ಮ ಪರಿಶುದ್ಧ ವಾಗ್ದಾನವನ್ನೂ, ತಮ್ಮ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:42
12 ತಿಳಿವುಗಳ ಹೋಲಿಕೆ  

ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮ ಇಸಾಕ ಯಾಕೋಬರಿಗೆ ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡು


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.


ಇವರ ಮೊಂಡತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಾಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು ನೆನಪುಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು