Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:44 - ಕನ್ನಡ ಸತ್ಯವೇದವು J.V. (BSI)

44 ಮತ್ತು ಆತನು ಅವರಿಗೆ ಪರಜನರ ದೇಶಗಳನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರಿಗೆ ಕೈ ಸೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಕೊಟ್ಟನವರಿಗೆ ಅನ್ಯರಾಷ್ಟ್ರಗಳ ನಾಡುಬೀಡನು I ಅವರ ಕೈವಶಮಾಡಿದನು ಅನ್ಯರ ಕಷ್ಟಾರ್ಜಿತವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು. ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:44
16 ತಿಳಿವುಗಳ ಹೋಲಿಕೆ  

ಜನಾಂಗಗಳನ್ನು ಅವರ ಮುಂಗಡೆಯಿಂದ ಓಡಿಸಿಬಿಟ್ಟು ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವಾಸ್ತ್ಯವಾಗಿರುವಂತೆ ಹಂಚಿಕೊಟ್ಟು ಆ ಜನಾಂಗಗಳ ಬೀಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ನೀವು ವ್ಯವಸಾಯಮಾಡದೆ ಬೆಳೆದಿರುವ ಭೂವಿುಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ನೀವು ವಾಸಿಸುತ್ತೀರಿ. ನೀವು ನೆಟ್ಟು ಬೆಳಸದೆ ಇರುವ ದ್ರಾಕ್ಷೆ, ಎಣ್ಣೇಮರ ಇವುಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ ಎಂಬದೇ.


ನೀವು ಬಹುಕಾಲದವರೆಗೆ ಅರಣ್ಯದಲ್ಲಿದ್ದನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವತಂತ್ರಿಸಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲಿ ಸಂಹರಿಸಿದೆನು.


ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ನೀನು ಐಗುಪ್ತದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು ಜನಾಂಗಗಳನ್ನು ಹೊರಗೆ ಹಾಕಿ ಅದನ್ನು ನೆಟ್ಟಿ.


ನಾನು ಯೊರ್ದನಿನಿಂದ ಪಶ್ಚಿಮ ಮಹಾಸಾಗರದವರೆಗೂ ಇರುವ ಜನಾಂಗಗಳಲ್ಲಿ ಸಂಹೃತರಾದವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.


ಯೆಹೋವನು ಇಸ್ರಾಯೇಲ್ಯರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲ್ಯರಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಿಸಿಕೊಂಡು ಅದರಲ್ಲಿ ವಾಸಮಾಡಿದರು.


ಮರುದಿವಸದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸ ತೊಡಗಿದರು. ಹೇಗಂದರೆ ಅದೇ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ ಸುಟ್ಟ ತೆನೆಗಳನ್ನೂ ತಿಂದರು.


ನಾನು ನಿಮಗೆ ಬರೆಯಿಸಿಕೊಟ್ಟ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ತಪ್ಪದೆ ಕೈಕೊಳ್ಳಬೇಕು,


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು