Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:6 - ಕನ್ನಡ ಸತ್ಯವೇದವು J.V. (BSI)

6 ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೆನೆಯಿರಿ ಆತನದ್ಭುತಗಳನು, ಮಹತ್ಕಾರ್ಯಗಳನು I ಆತನ ವದನ ವಿಧಿಸಿದಾ ನ್ಯಾಯನಿರ್ಣಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಆತನ ಸೇವಕನಾದ ಅಬ್ರಹಾಮನ ಸಂತತಿಯವರಾಗಿದ್ದೀರಿ; ಆತನು ಆರಿಸಿಕೊಂಡ ಯಾಕೋಬನ ಸಂತತಿಯವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರ ಸೇವಕನಾದ ಅಬ್ರಹಾಮನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:6
14 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ಯಾಹುವು ಯಾಕೋಬನ ವಂಶದವರಾದ ಇಸ್ರಾಯೇಲ್ಯರನ್ನು ಸ್ವಕೀಯಜನವನ್ನಾಗಿ ಆದುಕೊಂಡನಲ್ಲಾ.


ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.


ಹೀಗೆ ಆತನು ತನ್ನ ಪರಿಶುದ್ಧವಚನವನ್ನೂ ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು


ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ತನ್ನ ಪ್ರಜೆಯು ಉಲ್ಲಾಸದಿಂದಲೂ ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.


ಆತನ ಸೇವಕರಿಗೆ ಅದು ಸ್ವಾಸ್ತ್ಯವಾಯಿತು; ಆತನ ಕೃಪೆಯು ಶಾಶ್ವತವಾದದ್ದು.


ನನ್ನ ಸೇವಕನಾದ ಯಾಕೋಬಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ ಹೆಸರುಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು