Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:8 - ಕನ್ನಡ ಸತ್ಯವೇದವು J.V. (BSI)

8 ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. ಆತನು ತನ್ನ ಆಜ್ಞೆಗಳನ್ನು ಸಾವಿರ ತಲೆಮಾರುಗಳವರೆಗೂ ಜ್ಞಾಪಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:8
17 ತಿಳಿವುಗಳ ಹೋಲಿಕೆ  

ಆದದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ


ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಡುವನು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಹೀಗೆ ಆತನು ತನ್ನ ಪರಿಶುದ್ಧವಚನವನ್ನೂ ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು


ಆತನು ಸಾವಿರ ತಲೆಗಳವರೆಗಿರುವವರಿಗೂ ಮಾಡಿದ ವಾಗ್ದಾನ, ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.


ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನರಿಕೆ ಮಾಡಿ ಬಿನ್ನವಿಸಿದೆನು - ಓ ಕರ್ತನೇ, ಮಹೋನ್ನತನೂ ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನುಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ ಭಯಂಕರವೂ ಆಗಿದೆ.


ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.


ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮ ಇಸಾಕ ಯಾಕೋಬರಿಗೆ ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡು


ಯೆಹೋವನು ನಿಮ್ಮನ್ನು ಪ್ರೀತಿಸಿ ತಾನು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿ ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ನಿಮ್ಮಲ್ಲಿ ನೆರವೇರಿಸುವವನಾಗಿ


ಯೆಹೋವನು ಇಸ್ರಾಯೇಲ್ಯರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲ್ಯರಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಿಸಿಕೊಂಡು ಅದರಲ್ಲಿ ವಾಸಮಾಡಿದರು.


ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು