ಕೀರ್ತನೆಗಳು 105:9 - ಕನ್ನಡ ಸತ್ಯವೇದವು J.V. (BSI)9 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆತನು ಅಬ್ರಹಾಮನೊಡನೆ ಒಡಂಬಡಿಕೆ ಮಾಡಿಕೊಂಡನು. ಆತನು ಇಸಾಕನಿಗೆ ವಾಗ್ದಾನ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.