Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:2 - ಕನ್ನಡ ಸತ್ಯವೇದವು J.V. (BSI)

2 ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವದು ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ವರ್ಣಿಸಬಲ್ಲವನಾರು ಆತನ ಮಹತ್ಕಾರ್ಯಗಳನು? I ಯೋಗ್ಯರೀತಿಯಲಿ ಹೊಗಳಬಲ್ಲವರಾರು ಆತನನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು; ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸಿರಿ, ದೇವರನ್ನು ತಕ್ಕಂತೆ ಸ್ತುತಿಸುವವರು ಯಾರಿಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:2
9 ತಿಳಿವುಗಳ ಹೋಲಿಕೆ  

ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದದ್ದೆಂಬದನ್ನೂ ನೀವು ತಿಳುಕೊಳ್ಳುವಂತೆ ಅನುಗ್ರಹಿಸಲಿ.


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ನೀವು ದೇವರ ಪ್ರೀತಿಯಲ್ಲಿ ನೆಲೆಗೊಂಡು ನಿಂತು ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬದನ್ನು ದೇವಜನರೆಲ್ಲರೊಂದಿಗೆ ಗ್ರಹಿಸಲೂ


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯವು; ಅವು ಅಸಂಖ್ಯಾತವಾಗಿವೆ.


ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?


ಆತನು ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ;


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು