Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:21 - ಕನ್ನಡ ಸತ್ಯವೇದವು J.V. (BSI)

21 ಐಗುಪ್ತದಲ್ಲಿ ಮಹತ್ತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು I ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು! ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:21
22 ತಿಳಿವುಗಳ ಹೋಲಿಕೆ  

ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ ಅವನ ಸೇವಕರಿಗೂ ವಿರೋಧವಾಗಿ ಅದ್ಭುತಗಳನ್ನೂ ಮಹತ್ಕಾರ್ಯಗಳನ್ನೂ ನಡಿಸಿದನು.


ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು ಆತನ ಸಂಕಲ್ಪವನ್ನು ಕಾದಿರದೆ


ಆತನೊಬ್ಬನೇ ನಿಮ್ಮ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು. ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.


ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.


ಎದುರುಮಾತನ್ನಾಡದೆ ಯಾವದನ್ನೂ ಕದ್ದಿಟ್ಟುಕೊಳ್ಳದೆ ಪೂರಾ ನಂಬಿಗಸ್ತರೆಂದು ಹೆಸರುಹೊಂದಿ ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಅಲಂಕಾರವಾಗಿರಬೇಕೆಂದು ಬೋಧಿಸು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ.


ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.


ಆತನು ಐಗುಪ್ತ್ಯರನ್ನೂ ಫರೋಹನನ್ನೂ ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ


ನನ್ನ ಆತ್ಮವು ನನ್ನ ರಕ್ಷಕನಾದ ದೇವರ ವಿಷಯದಲ್ಲಿ ಉಲ್ಲಾಸಗೊಂಡದೆ.


ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು.


ಏಕಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ; ಹೀಗಿರಲು ನೀನು ಇಷ್ಟವಾದ ಗಿಡಗಳನ್ನು ನೆಟ್ಟು ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ಹಾಕಿದ್ದಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು