Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:34 - ಕನ್ನಡ ಸತ್ಯವೇದವು J.V. (BSI)

34 ಅನ್ಯಜನಾಂಗದವರನ್ನು ಸಂಹರಿಸಬೇಕೆಂಬ ಯೆಹೋವನ ಆಜ್ಞೆಗೆ ಅವಿಧೇಯರಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, ಯೆಹೋವನ ಆಜ್ಞೆಗೆ ಅವಿಧೇಯರಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅನುಸರಿಸಲಿಲ್ಲ ಅವರು ಪ್ರಭುವಿನಾಜ್ಞೆಯನು I ಆತ ಸಂಹರಿಸಲಿಲ್ಲ ಶೋಧಿಸಿದಾ ಜನರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಕಾನಾನಿನಲ್ಲಿ ವಾಸವಾಗಿದ್ದ ಅನ್ಯ ಜನಾಂಗಗಳನ್ನು ನಾಶಮಾಡಲು ಯೆಹೋವನು ಅವರಿಗೆ ಹೇಳಿದನು. ಆದರೆ ಇಸ್ರೇಲರು ದೇವರಿಗೆ ವಿಧೇಯರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ ಜನಗಳನ್ನು ಅವರು ದಂಡಿಸದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:34
18 ತಿಳಿವುಗಳ ಹೋಲಿಕೆ  

ಯೆರೂಸಲೇವಿುನಲ್ಲಿದ್ದ ಯೆಬೂಸಿಯರನ್ನು ಹೊರಡಿಸುವದು ಬೆನ್ಯಾಮೀನ್ಯರಿಂದ ಆಗದೆ ಹೋಯಿತು. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇವಿುನಲ್ಲಿಯೇ ವಾಸವಾಗಿದ್ದಾರೆ.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು.


ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಶಿಶುಗಳನ್ನೂ ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ ಅಂದನು.


ಯೆಹೋವನು ಯೆಹೂದ್ಯರ ಸಂಗಡ ಇದ್ದದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದದರಿಂದ ಅವರನ್ನು ಹೊರಡಿಸುವದು ಆಗಲಿಲ್ಲ.


ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಕೆಲಸ ಮಾಡುತ್ತಾರೆ.


ಯೆರೂಸಲೇವಿುನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸುವದು ಯೆಹೂದಕುಲದವರಿಂದ ಆಗದೆ ಹೋಯಿತು. ಆದದರಿಂದ ಅವರು ಇಂದಿನವರೆಗೂ ಯೆಹೂದಕುಲದವರೊಡನೆ ಯೆರೂಸಲೇವಿುನಲ್ಲೇ ವಾಸವಾಗಿದ್ದಾರೆ.


ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?


ಅವರು ಇಂದಿನವರೆಗೂ ಬಿಟ್ಟೀ ಕೆಲಸದವರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು