Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:40 - ಕನ್ನಡ ಸತ್ಯವೇದವು J.V. (BSI)

40 ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆತನು ತನ್ನ ಜನರ ಮೇಲೆ ಕೋಪಗೊಂಡನು; ಅವರ ವಿಷಯದಲ್ಲಿ ಬೇಸರಗೊಂಡನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆಗ ಯೆಹೋವ ದೇವರು ತಮ್ಮ ಜನರ ಮೇಲೆ ಬಹು ಬೇಸರಗೊಂಡರು. ದೇವರು ತಮ್ಮ ವಾರಸುದಾರರಾದ ಇಸ್ರಾಯೇಲರ ಮೇಲೆ ಅಸಂತೋಷಗೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:40
14 ತಿಳಿವುಗಳ ಹೋಲಿಕೆ  

ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿ ಬಿಟ್ಟನು; ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.


ಇವರು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ ಎಂದು ಬಿನ್ನೈಸಿದೆನು.


ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟನು. ಅವರು ಎಂಟು ವರುಷಗಳವರೆಗೆ ಅವನಿಗೆ ದಾಸರಾಗಿದ್ದರು.


ಆದದರಿಂದ ಯೆಹೋವನ ಕೋಪವು ಇಸ್ರಾಯೇಲ್ಯರ ಮೇಲೆ ಉರಿಯಹತ್ತಿತು; ಆತನು - ಈ ಜನರ ಪಿತೃಗಳಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.


ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಗಳ ವಿಷಯದಲ್ಲಿ ವ್ಯಥೆಪಟ್ಟನು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.


ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?


ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದದರಿಂದ ನನಗೆ ಹೇಸಿಗೆಯಾದರು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಾಯೇಲ್ಯರಿಗೆ ಮಹಾಬಾಧಕನಾದ ಹದದನಲ್ಲದೆ ಇವನೂ ವೈರಿಯಾಗಿದ್ದನು. ಇವನು ಅರಾಮ್‍ದೇಶದಲ್ಲಿ ಆಳುವವನಾಗಿ ಇಸ್ರಾಯೇಲ್ಯರನ್ನು ಬಹಳವಾಗಿ ದ್ವೇಷಿಸಿದನು.


ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವಾಸ್ತ್ಯವನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು