Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:41 - ಕನ್ನಡ ಸತ್ಯವೇದವು J.V. (BSI)

41 ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಎಂತಲೆ ಒಪ್ಪಿಸಿದನವರನು ಅನ್ಯರಾಷ್ಟ್ರಗಳ ಕೈಗೆ I ಹಗೆಮಾಡುತ್ತಿದ್ದವರೇ ಅಧಿಕಾರಿಗಳಾದರವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆತನು ತನ್ನ ಜನರನ್ನು ಅನ್ಯಜನಾಂಗಗಳಿಗೆ ಒಪ್ಪಿಸಿದನು; ಅವರ ಮೇಲೆ ದೊರೆತನ ಮಾಡುವಂತೆ ವೈರಿಗಳಿಗೆ ಅವರನ್ನು ಬಿಟ್ಟುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅವರನ್ನು ಇತರ ಜನಾಂಗಗಳ ಕೈಗೆ ಒಪ್ಪಿಸಿಕೊಟ್ಟರು. ಹೀಗೆ ಅವರ ವೈರಿಗಳು ಅವರನ್ನು ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:41
16 ತಿಳಿವುಗಳ ಹೋಲಿಕೆ  

ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿ ಬಿಟ್ಟನು; ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿವಿುತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.


ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟನು. ಅವರು ಎಂಟು ವರುಷಗಳವರೆಗೆ ಅವನಿಗೆ ದಾಸರಾಗಿದ್ದರು.


ಅವರ ಶರಣನು ಅವರನ್ನು ಶತ್ರುಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಮಂದಿ ಸೋತುಹೋಗುತ್ತಿದ್ದರೋ? ಯೆಹೋವನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತುಸಾವಿರ ಮಂದಿ ಓಡಿಹೋಗುತ್ತಿದ್ದರೋ?


ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.


ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವದಿಲ್ಲ.


ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ಇಸ್ರಾಯೇಲ್ಯರು ಅವನಿಗೆ ಹದಿನೆಂಟು ವರುಷ ದಾಸರಾಗಿದ್ದರು.


ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ - ಫಿಲಿಷ್ಟಿಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದಾರೆಂಬದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ ಎಂದು ಕೇಳಲು ಅವನು - ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ ಅಂದನು.


ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.


ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು