Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:43 - ಕನ್ನಡ ಸತ್ಯವೇದವು J.V. (BSI)

43 ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ ಅವರು ತಮ್ಮ ಆಲೋಚನೆಯನ್ನು ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಪ್ರಭು ಪದೇಪದೇ ವಿಮುಕ್ತಗೊಳಿಸಿದನಾದರೂ I ಪರ್ಯಾಲೋಚಿಸದೆ ಪ್ರತಿಭಟನೆ ಮಾಡಿದರವರು I ಈ ಪರಿಯ ಅಕ್ರಮದ ನಿಮಿತ್ತ ಅವನತಿಗಿಳಿದರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆತನು ತನ್ನ ಜನರನ್ನು ಅನೇಕ ಸಲ ರಕ್ಷಿಸಿದರೂ ಅವರು ಆತನಿಗೆ ವಿರೋಧವಾಗಿ ತಿರುಗಿ ತಮ್ಮ ಇಷ್ಟಾನುಸಾರವಾಗಿ ಮಾಡಿದರು. ಅವರು ಅನೇಕಾನೇಕ ಕೆಟ್ಟಕಾರ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅನೇಕ ಸಾರಿ ದೇವರು ಇಸ್ರಾಯೇಲರನ್ನು ಬಿಡಿಸಿದರು, ಆದರೆ ಅವರು ತಿರುಗಿಬೀಳುತ್ತಲೇ ಇದ್ದರು; ತಮ್ಮ ಅಕ್ರಮದಿಂದಲೇ ಅವರು ಕುಗ್ಗಿಹೋದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:43
11 ತಿಳಿವುಗಳ ಹೋಲಿಕೆ  

ಆದದರಿಂದ - ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಸಡಿಲ ಬಿಟ್ಟೆನು.


ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ


ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.


ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ವಿುಡಿತೆಗಳಂತೆ ಗುಂಪುಗುಂಪಾಗಿ ಬಂದರು; ಅವರೂ ಅವರ ಒಂಟೆಗಳೂ ಅಸಂಖ್ಯ. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಊರುಬಾಗಲವರೆಗೆ ಬಂದಿತ್ತು. ಇಸ್ರಾಯೇಲ್ಯರ ನಾಲ್ವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳು ಇದ್ದಿಲ್ಲ.


ಇಸ್ರಾಯೇಲ್ಯರು ವಿುದ್ಯಾನ್ಯರ ದೆಸೆಯಿಂದ ಬಲು ಕುಗ್ಗಿ ಹೋಗಿ ಯೆಹೋವನಿಗೆ ಮೊರೆಯಿಟ್ಟರು.


ಇವೇ ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ಬಿಡಿಸಿದರೂ


ಅವರು ದೇವರ ಕಟ್ಟಳೆಗಳಿಗೆ ವಿರೋಧವಾಗಿ ನಿಂತು ಪರಾತ್ಪರನ ಸಂಕಲ್ಪವನ್ನು ನಿರಾಕರಿಸಿದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು