Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:46 - ಕನ್ನಡ ಸತ್ಯವೇದವು J.V. (BSI)

46 ಅವರನ್ನು ಸೆರೆಯೊಯ್ದವರಲ್ಲಿ ಅವರ ಮೇಲೆ ದಯೆಹುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಅನ್ಯ ಜನಾಂಗಗಳು ಆತನ ಜನರನ್ನು ಸೆರೆಯಾಳುಗಳನ್ನಾಗಿ ಎಳೆದೊಯ್ದರು. ಅನ್ಯಜನಾಂಗಗಳು ತನ್ನ ಜನರಿಗೆ ದಯೆತೋರುವಂತೆ ಆತನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:46
8 ತಿಳಿವುಗಳ ಹೋಲಿಕೆ  

ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗಗೊಡಿಸುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು.


ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.


ಇದಕ್ಕೆ ಯೆಹೋವನು - ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು, ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.


ಕಬ್ಬಿಣ ಕರಗಿಸುವ ಕುಲಿಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು


ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.


ನೀವು ಯೆಹೋವನ ಕಡೆಗೆ ತಿರುಗಿಕೊಳ್ಳುವದಾದರೆ ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ ತಿರಿಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳವನಾಗಿರುತ್ತಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವದಿಲ್ಲ ಎಂಬದೇ.


ಪರಲೋಕದಲ್ಲಿರುವ ನೀನು ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ಪಿತೃಗಳಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.


ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು