Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:47 - ಕನ್ನಡ ಸತ್ಯವೇದವು J.V. (BSI)

47 ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಹೇ ಪ್ರಭು, ನಮ್ಮ ದೇವಾ, ನಮ್ಮನ್ನುದ್ಧರಿಸು I ನಾಡುನಾಡುಗಳಿಂದ ನಮ್ಮನೊಂದುಗೂಡಿಸು I ನಿನ್ನ ಪವಿತ್ರ ನಾಮವನು ನಾವು ಭಜಿಸುವೆವು I ನಿನ್ನ ಸ್ತುತಿ ಸ್ತೋತ್ರಗಳಲಿ ಹೆಚ್ಚಳ ಪಡುವೆವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು! ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು. ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:47
12 ತಿಳಿವುಗಳ ಹೋಲಿಕೆ  

ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ; ಚದರಿಹೋಗಿದ್ದ ಇಸ್ರಾಯೇಲ್ಯರನ್ನು ಕೂಡಿಸುತ್ತಿದ್ದಾನೆ.


ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲ್ಯರು ಹರ್ಷಿಸುವರು.


ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸುಕಂಡವರಂತಿದ್ದೆವು.


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ನಿಮ್ಮನ್ನು ಕನಿಕರಿಸಿ ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ತಿರಿಗಿ ಕೂಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು