ಕೀರ್ತನೆಗಳು 106:7 - ಕನ್ನಡ ಸತ್ಯವೇದವು J.V. (BSI)7 ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀನು ಈಜಿಪ್ಟಿನಲ್ಲಿ ಮಾಡಿದ ಮಹತ್ಕಾರ್ಯಗಳಿಂದ ನಮ್ಮ ಪೂರ್ವಿಕರು ಏನೂ ಕಲಿತುಕೊಳ್ಳಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ತಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು. ಅಧ್ಯಾಯವನ್ನು ನೋಡಿ |