Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:8 - ಕನ್ನಡ ಸತ್ಯವೇದವು J.V. (BSI)

8 ಆದರೂ ಆತನು ತನ್ನ ಹೆಸರಿನ ನಿವಿುತ್ತವಾಗಿಯೂ ತನ್ನ ಶೌರ್ಯವನ್ನು ಪ್ರಕಟಿಸುವದಕ್ಕಾಗಿಯೂ ಅವರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೂ ತನ್ನ ನಾಮಪ್ರಯುಕ್ತ ರಕ್ಷಿಸಿದನವರನು I ಪ್ರಕಟಿಸಿದನಾತ ಹೀಗೆ ತನ್ನ ಶಕ್ತಿಸಾಮರ್ಥ್ಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಆತನು ತನ್ನ ಹೆಸರಿನ ನಿಮಿತ್ತವಾಗಿ ನಮ್ಮ ಪೂರ್ವಿಕರನ್ನು ರಕ್ಷಿಸಿದನು; ತನ್ನ ಮಹಾಶಕ್ತಿಯನ್ನು ತೋರಿಸುವುದಕ್ಕಾಗಿ ಅವರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೂ ದೇವರು ತಮ್ಮ ಮಹಾಶಕ್ತಿಯನ್ನು ಅವರಿಗೆ ತಿಳಿಯಮಾಡುವ ಹಾಗೆ, ತಮ್ಮ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:8
20 ತಿಳಿವುಗಳ ಹೋಲಿಕೆ  

ಆದರೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡುವೆನು ಎಂಬದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.


ದೇವರು ಫರೋಹನನ್ನು ಕುರಿತು - ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬದಾಗಿ ಶಾಸ್ತ್ರೋಕ್ತಿ ಉಂಟು.


ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ ನನ್ನ ಹೆಸರಿನ ನಿವಿುತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ಇದು ಕರ್ತನಾದ ಯೆಹೋವನ ನುಡಿ.


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.


ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ, ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.


ಕಾನಾನ್ಯರೂ ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತಿಕೊಂಡು ಭೂಲೋಕದಲ್ಲಿ ನಮ್ಮ ಹೆಸರುಳಿಯದಂತೆ ಮಾಡುವರು. ನಿನ್ನ ಮಹಾನಾಮಕ್ಕೋಸ್ಕರ ಏನು ಮಾಡುವಿ ಅಂದನು.


ಯೆಹೋವನೇ, ನಿನ್ನ ಭುಜಬಲವು ಎಷ್ಟೋ ಘನವಾದದ್ದು; ಯೆಹೋವನೇ, ನಿನ್ನ ಭುಜಬಲವು ನಿನ್ನ ಶತ್ರುಗಳನ್ನು ಪುಡಿಪುಡಿ ಮಾಡುತ್ತದೆ.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ ನಿನ್ನ ಹೆಸರಿನ ನಿವಿುತ್ತ ಕಾರ್ಯವನ್ನು ಸಾಧಿಸು; ನಮ್ಮ ದ್ರೋಹಗಳು ಬಹಳ, ನಿನಗೆ ಪಾಪವನ್ನು ಮಾಡಿದ್ದೇವೆ.


ಯೆಹೋವನೇ, ನಿನ್ನ ಹೆಸರಿನ ನಿವಿುತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.


ಆತನು ಅನ್ಯಜನಗಳ ಸ್ವಾಸ್ತ್ಯವನ್ನು ತನ್ನ ಪ್ರಜೆಗೆ ಕೊಡುವದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.


ತರುವಾಯ ಮೋಶೆಯು - ಯೆಹೋವನು ಇಸ್ರಾಯೇಲ್ಯರಿಗೋಸ್ಕರ ಫರೋಹನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ಮಾವನಿಗೆ ವಿವರಿಸಲಾಗಿ


ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು ಅಂದನು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ ನಿಮ್ಮನ್ನು ಕೈಬಿಡುವದೇ ಇಲ್ಲ.


ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಮಾರ್ಗದಲ್ಲಿ ನನ್ನನ್ನು ನಡಿಸುತ್ತಾನೆ.


ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು ನನ್ನ ಕೀರ್ತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು