Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:9 - ಕನ್ನಡ ಸತ್ಯವೇದವು J.V. (BSI)

9 ಆತನು ಗದರಿಸಲು ಕೆಂಪು ಸಮುದ್ರವು ಒಣಗಿ ಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಣಗಿಹೋಯಿತಾ ಕೆಂಗಡಲು ಆತನ ಗದರಿಕೆಗೆ I ದಾಟಿಸಿದನಾ ಸಾಗರವನು ಅಡವಿಯೋ ಎಂಬ ಹಾಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ಆಜ್ಞಾಪಿಸಲು ಕೆಂಪು ಸಮುದ್ರವು ಒಣಗಿಹೋಯಿತು. ಆತನು ಆಳವಾದ ಸಮುದ್ರವನ್ನು ಇಬ್ಭಾಗ ಮಾಡಿ ಮರಳುಗಾಡಿನಂತೆ ಒಣಗಿಹೋಗಿದ್ದ ಭೂಮಿಯ ಮೇಲೆ ನಮ್ಮ ಪೂರ್ವಿಕರನ್ನು ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ಕೆಂಪು ಸಮುದ್ರವನ್ನು ಗದರಿಸಲು, ಅದು ಒಣಗಿ ಹೋಯಿತು; ಹೀಗೆ ಮರುಭೂಮಿಯಲ್ಲಿ ನಡೆದು ಹೋದಂತೆ ಜಲಾಗಾಧದಲ್ಲಿ ಇಸ್ರಾಯೇಲರನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:9
16 ತಿಳಿವುಗಳ ಹೋಲಿಕೆ  

ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ತೋರಿಬಂದವು.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಕರ್ಮೆಲೂ ಕಂದುತ್ತವೆ, ಲೆಬನೋನಿನ ಚಿಗುರು ಬಾಡುತ್ತದೆ.


ಸಮುದ್ರವನ್ನೂ ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತಜನರು ಹಾದುಹೋಗುವದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದ ಬಾಹು ನೀನೇ ಹೌದು.


ಆತನು ಸಮುದ್ರವನ್ನು ಭೇದಿಸಿ ಅದರ ನೀರನ್ನು ರಾಶಿಯಂತೆ ನಿಲ್ಲಿಸಿ ಅವರನ್ನು ದಾಟಿಸಿದನು.


ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯನ್ನು ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.


ನಮ್ಮ ಪಿತೃಗಳು ಸಮುದ್ರ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದಿ. ಅವರನ್ನು ಹಿಂದಟ್ಟುವವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿ ಬಿಟ್ಟಿ.


ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು