Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:25 - ಕನ್ನಡ ಸತ್ಯವೇದವು J.V. (BSI)

25 ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ ಅದರಲ್ಲಿ ತೆರೆಗಳನ್ನು ಎಬ್ಬಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬಿರುಗಾಳಿಯೆದ್ದಿತು ಆತನಾಜ್ಞೆಯೊಂದಕ್ಕೆ I ತರಂಗಗಳು ಭೊರ್ಗರೆದವು ಅದರೊಂದಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆತನು ಆಜ್ಞಾಪಿಸಲು ಬಲವಾದ ಗಾಳಿ ಬೀಸತೊಡಗಿತು; ಅಲೆಗಳು ದೊಡ್ಡದಾಗತೊಡಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೇವರು ಆಜ್ಞಾಪಿಸಿ ಬಿರುಗಾಳಿಯನ್ನು ಎಬ್ಬಿಸಿದರು; ಅದು ಅದರ ತೆರೆಗಳನ್ನು ಎಬ್ಬಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:25
9 ತಿಳಿವುಗಳ ಹೋಲಿಕೆ  

ಬಳಿಕ ಯೆಹೋವನು ಬಿರುಗಾಳಿಯನ್ನು ಸಮುದ್ರದ ಮೇಲೆ ಬಲವಾಗಿ ಬೀಸಲು ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.


ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲಕಲ್ಲೋಲವಾಗಿ ದೋಣಿಯು ತೆರೆಗಳಿಂದ ಮುಚ್ಚಿಹೋಯಿತು; ಆದರೆ ಆತನು ನಿದ್ದೆ ಹತ್ತಿ ಮಲಗಿದ್ದನು.


ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳೂ ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯೂ


ಆತನು ಆಜ್ಞಾಪಿಸಲು ವಿುಡಿತೆಗಳೂ ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು


ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರಿಟ್ಟವು; ನದಿಗಳು ಘೋಷಿಸುತ್ತವೆ.


ಇದಲ್ಲದೆ ಬಿರುಗಾಳಿ ಬೀಸುವದರಿಂದ ಸಮುದ್ರವು ಅಲ್ಲಕಲ್ಲೋಲವಾಗಿತ್ತು.


ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತಗಳಲ್ಲಿ ವಿಷದ ಹುಳಗಳೂ ಹೇನುಗಳೂ ಉಂಟಾದವು.


ಆಗ ನಾವಿಕರು ಹೆದರಿ ತಮ್ಮ ತಮ್ಮ ದೇವರುಗಳಿಗೆ ಮೊರೆಯಿಟ್ಟು ತಮ್ಮ ಕಷ್ಟವು ಕಡಿಮೆಯಾಗುವ ಹಾಗೆ ಹಡಗಿನ ಸಾಮಾನುಗಳನ್ನು ಸಮುದ್ರಕ್ಕೆ ಬಿಸಾಟುಬಿಟ್ಟರು. ಇಷ್ಟರೊಳಗೆ ಯೋನನು ಹಡಗಿನ ಒಳಭಾಗಕ್ಕೆ ಇಳಿದು ಮಲಗಿಕೊಂಡಿದ್ದನು; ಗಾಢನಿದ್ರೆ ಹತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು