Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:3 - ಕನ್ನಡ ಸತ್ಯವೇದವು J.V. (BSI)

3 ಪೂರ್ವಪಶ್ಚಿಮೋತ್ತರಗಳಲ್ಲಿಯೂ ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ, ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಂತೆಯೇ ವಂದಿಸಲಿ ಬಂದವರು ಚತುರ್ದಿಕ್ಕುಗಳಿಂದ I ಒಂದಾಗಿ ಕೂಡಿಸಲ್ಪಟ್ಟವರೆಲ್ಲರು ನಾನಾ ದೇಶಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು; ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಸಹ ಹಾಗೆ ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:3
14 ತಿಳಿವುಗಳ ಹೋಲಿಕೆ  

ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತದೇಶಗಳಿಂದಲೂ ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದನೋ ಅಲ್ಲಿಗೆ ತಿರಿಗಿ ಬರಮಾಡುವೆನು. ಇದು ಯೆಹೋವನ ನುಡಿ.


ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲಾ ದ್ರೋಹಗಳ ಹೊರೆಯನ್ನು ಹೊರುತ್ತಾ ನಾಚಿಕೆಪಡುವರು.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.


ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲ್ಯರನ್ನು ಚದರಿಸಿದಾತನು ಕುರುಬನು ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು ಎಂದು ಪ್ರಕಟಿಸಿರಿ.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು, ಅವರೊಂದಿಗೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರತರುವೆನು; ದೊಡ್ಡಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ನಿಮ್ಮನ್ನು ಕನಿಕರಿಸಿ ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ತಿರಿಗಿ ಕೂಡಿಸುವನು.


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನಂದರೆ - ನಾನು ಕೂಡಿಸಿದ ಇಸ್ರಾಯೇಲ್ಯರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು ಎಂಬದೇ.


ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು