Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:33 - ಕನ್ನಡ ಸತ್ಯವೇದವು J.V. (BSI)

33 ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನೀಚ ನಿವಾಸಿಗಳ ಕಾರಣದಿಂದ I ನದಿಗಳನೂ ಮರುಭೂಮಿಯಾಗಿಸಿದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆತನು ನದಿಗಳನ್ನು ಮರಳುಗಾಡನ್ನಾಗಿ ಮಾರ್ಪಡಿಸಿದನು; ಹರಿಯುವ ಒರತೆಗಳನ್ನು ತಡೆದು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ದೇವರು ನದಿಗಳನ್ನು ಮರುಭೂಮಿಯಾಗಿ ಮಾರ್ಪಡಿಸಿದರು, ನೀರಿನ ಬುಗ್ಗೆಗಳನ್ನು ದಾಹಗೊಂಡ ಭೂಮಿಯಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:33
16 ತಿಳಿವುಗಳ ಹೋಲಿಕೆ  

ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ತಾರಿಸಿ ನದಿಗಳನ್ನು ಒಣದಿಣ್ಣೆ ಮಾಡಿ ಕೆರೆಗಳನ್ನು ಬತ್ತಿಸುವೆನು.


ಯೆಹೋವನು ಬಡಗಲಿಗೆ ಕೈಚಾಚಿ ಅಶ್ಶೂರವನ್ನು ಧ್ವಂಸಪಡಿಸುವನು; ನಿನೆವೆಯನ್ನು ಹಾಳುಮಾಡಿ ಮರುಭೂವಿುಯಂತೆ ಒಣಗಿಸಿಬಿಡುವನು.


ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಕರ್ಮೆಲೂ ಕಂದುತ್ತವೆ, ಲೆಬನೋನಿನ ಚಿಗುರು ಬಾಡುತ್ತದೆ.


ಭೂಜಂತುಗಳೂ ನಿನ್ನ ಕಡೆಗೆ ತಲೆಯೆತ್ತುತ್ತವೆ; ತೊರೆಗಳು ಬತ್ತಿಹೋಗಿವೆ, ಕಾಡಿನ ಹುಲ್ಗಾವಲನ್ನು ಕಿಚ್ಚು ನುಂಗಿಬಿಟ್ಟಿದೆ.


ನಾನು ನದೀಶಾಖೆಗಳನ್ನು ಬತ್ತಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಯೆಹೋವನಾದ ನಾನೇ ನುಡಿದಿದ್ದೇನೆ.


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ಜಲರಾಶಿಗೆ - ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು ಎಂದು ನಾನು ಅಪ್ಪಣೆಕೊಡುವವನಾಗಿದ್ದೇನೆ;


ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.


ಅಹಾಬನು ಅವನಿಗೆ - ನಾವು ದೇಶಸಂಚಾರಮಾಡುತ್ತಾ ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವವು; ಇಲ್ಲವಾದರೆ ಎಲ್ಲಾ ಸತ್ತುಹೋಗುವವು ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು