ಕೀರ್ತನೆಗಳು 107:38 - ಕನ್ನಡ ಸತ್ಯವೇದವು J.V. (BSI)38 ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ದೇವರು ಅವರನ್ನು ಆಶೀರ್ವದಿಸಿದ್ದರಿಂದ, ಅವರು ಬಹಳವಾಗಿ ಹೆಚ್ಚಿದರು; ದೇವರು ದನಗಳು ಕಡಿಮೆಯಾಗುವಂತೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿ |
ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ ಪಶು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನುಂಟುಮಾಡುವನು. ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು ಆತನು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರಿಗಿ ಸಂತೋಷಪಟ್ಟು ನಿಮಗೆ ಮೇಲನ್ನುಂಟುಮಾಡುವನು.