Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:5 - ಕನ್ನಡ ಸತ್ಯವೇದವು J.V. (BSI)

5 ಹಸಿವೆನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನರಳಿದರು ಹಸಿವೆ ಬಾಯಾರಿಕೆಯಿಂದ I ಸೊರಗಿದರು ಮನೋಯಾತನೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ಹಸಿವೆಯಿಂದಲೂ ಬಾಯಾರಿಕೆಯಿಂದಲೂ ಬಲಹೀನರಾಗತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಸಿದು, ದಾಹಗೊಂಡು ಅವರ ಪ್ರಾಣವು ಕುಗ್ಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:5
9 ತಿಳಿವುಗಳ ಹೋಲಿಕೆ  

ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದುಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.


ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು; ಅವನೂ ಹಸಿದು ಬಳಲುವನು, ನೀರಿಲ್ಲದೆ ಕಂಗೆಡುವನು.


ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.


ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು.


ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಸಂಕಟದಿಂದ ಮೋಶೆಯ ಮೇಲೆ ಗುಣುಗುಟ್ಟುತ್ತಾ - ನೀನು ನಮ್ಮನ್ನೂ ನಮ್ಮ ಮಕ್ಕಳನ್ನೂ ದನಗಳನ್ನೂ ಐಗುಪ್ತ ದೇಶದಿಂದ ಕರತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ ಎಂದರು.


ಬೆಣ್ಣೆ ಕುರಿ ಹಸುವಿನ ಗಿಣ್ಣು ಇವುಗಳನ್ನೂ ತಂದು ಕೊಟ್ಟರು. ಜನರು ಅರಣ್ಯಪ್ರಯಾಣದಿಂದ ಹಸಿದವರೂ ದಣಿದವರೂ ಬಾಯಾರಿದವರೂ ಆಗಿದ್ದಾರೆ ಅಂದುಕೊಂಡು ಇವುಗಳನ್ನು ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು